ಯೋಗ್ಯರಿಗೆ ಮತ ಹಾಕಿ: ನ್ಯಾ. ರಾಮಚಂದ್ರಪ್ಪ
ಹಾನಗಲ್ಲ: ಅಭಿವೃದ್ಧಿ ಕುಂಠಿತಗೊಳ್ಳಲು ಚುನಾವಣೆಗಳಲ್ಲಿ ಸೂಕ್ತ ಜನಪ್ರತಿನಿಧಿಗಳನ್ನು ಆಯ್ಕೆ ಮಾಡದಿರುವುದೇ ಪ್ರಮುಖ ಕಾರಣ. ಸಂಪನ್ಮೂಲಗಳ ಸರಿಯಾದ ಹಂಚಿಕೆ ಹಾಗೂ ನಿರ್ವಹಣೆ ಕೊರತೆಯಿಂದ ಹಿನ್ನಡೆಯಾಗುತ್ತಿದೆ ಎಂದು ಹಾನಗಲ್ಲ ಜೆಎಂಎಫ್ಸಿ ಹಿರಿಯ ವಿಭಾಗದ ನ್ಯಾಯಾಧೀಶ ಎಂ. ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ಹಾನಗಲ್ಲಿನ ತಾಲೂಕು ಕಚೇರಿ ಸಭಾಭವನದಲ್ಲಿ ನಡೆದ ಮತದಾರರ ದಿನಾಚರಣೆ ಉದ್ಘಾಟಿಸಿದ ಅವರು, ಮತದಾರರ ನಿರಾಸಕ್ತಿಯಿಂದ ಮತದಾನದ ಪ್ರಮಾಣ ಕ್ಷೀಣಿಸುತ್ತಿದೆ. ವಿದ್ಯಾವಂತರೂ ಮತದಾನ ಮಾಡಲು ಉತ್ಸಾಹ ತೋರುತ್ತಿಲ್ಲ. ಮತದಾನವನ್ನು ನಮ್ಮ ಕರ್ತವ್ಯವೆಂದು ಭಾವಿಸಬೇಕು. ಚುನಾವಣಾ ಗುರುತಿನ ಚೀಟಿಯನ್ನು ಉಳಿದೆಲ್ಲ ಯೋಜನೆಗಳ ಪ್ರಯೋಜನ ಪಡೆಯಲು ಬಳಸುವ ಜನ, ಮತದಾನ ಮಾಡುವುದೇ ಇಲ್ಲ. ಆಸೆ-ಆಮಿಷಗಳಿಗೆ ಬಲಿಯಾಗದೆ ಪ್ರಾಮಾಣಿಕವಾಗಿ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಪ್ರಜಾ ಪ್ರತಿನಿಧಿ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ತರುವ ಅಗತ್ಯವಿದೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ರವಿ ವಡೆಯರ ಮಾತನಾಡಿ, ಜಗತ್ತಿನ ಶೇ. 75ರಷ್ಟು ರಾಷ್ಟ್ರಗಳು ಪ್ರಜಾಪ್ರಭುತ್ವ ಆಡಳಿತವನ್ನು ಅಳವಡಿಸಿಕೊಂಡಿವೆ. ವ್ಯವಸ್ಥೆಯನ್ನು ಶುದ್ಧೀಕರಣ ಮಾಡಿದರೆ ಮಾತ್ರ ಸುಧಾರಣೆ ಸಾಧ್ಯ. ಆಡಳಿತ ವ್ಯವಸ್ಥೆಯ ನ್ಯೂನತೆಗಳನ್ನು ಕಂಡು ಜನತೆ ನಿರಾಶರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಮತದಾನದ ಕುರಿತು ಇನ್ನಷ್ಟು ತಿಳಿವಳಿಕೆ ನೀಡುವ ಅಗತ್ಯವಿದೆ ಎಂದರು.
ತಹಸೀಲ್ದಾರ್ ಡಾ ನಾಗೇಂದ್ರ ಹೊನ್ನಳ್ಳಿ ಅಧ್ಯಕ್ಷತೆ ವಹಿಸಿ, ರಾಜ್ಯದಲ್ಲಿ ಗರಿಷ್ಠ ಮತದಾನವಾದ ತಾಲೂಕುಗಳಲ್ಲಿ ಹಾನಗಲ್ಲ ಎರಡನೇ ಸ್ಥಾನದಲ್ಲಿದೆ. ಇದು ಜಾಗೃತ ತಾಲೂಕು ಎಂಬ ಹೆಮ್ಮೆ ನಮಗಿದೆ. ಜಗತ್ತಿನ ಬೇರೆ ದೇಶಗಳು ಭಾರತದ ಅಧಿಕಾರಿಗಳ ಮೂಲಕ ಪ್ರಜಾಪ್ರಭುತ್ವ ಮಾದರಿಯ ತರಬೇತಿ ಪಡೆಯುತ್ತಿದ್ದಾರೆ. ಪ್ರಜಾಪ್ರಭುತ್ವ, ಮತದಾನದ ಪರಿವರ್ತನೆಯ ಕಾಲ ಸನ್ನಿಹಿತವಾಗುತ್ತಿದೆ. ತಾಲೂಕಿನ ಪ್ರತಿ ಮತಗಟ್ಟೆಗೂ ಅಧಿಕಾರಿಗಳನ್ನು ನೇಮಿಸಿದ್ದು, ಅವರು ಮತಪಟ್ಟಿಯ ಲೋಪಗಳನ್ನು ಸರಿಪಡಿಸಿ, ಹೊಸ ಮತದಾರರನ್ನು ಸೇರಿಸುತ್ತಿದ್ದಾರೆ ಎಂದರು.
ತಾಪಂ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರು, ಉಪಾಧ್ಯಕ್ಷೆ ಅನಿತಾ ಶಿವೂರ, ಜಿಪಂ ಸದಸ್ಯೆ ಕಸ್ತೂರವ್ವ ವಡ್ಡರ, ಉಪ ತಹಸೀಲ್ದಾರ್ ಆರ್.ಸಿ. ನದಾಫ, ಪಿಡಬ್ಲೂಡಿ ಎಂಜಿನಿಯರ್ ಬಿ.ವೈ. ಬಂಡಿವಡ್ಡರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭು ಸುಣಗಾರ, ಸಿಪಿಐ ಬಿ.ಎಸ್. ಮಂಟೂರ, ಪಿಎಸ್ಐ ಮಹದೇವ ಯಲಿಗಾರ, ಪುರಸಭೆ ಮುಖ್ಯಾಧಿಕಾರಿ ಸೋಮಶೇಖರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

