ಪ್ರಸವಪೂರ್ವ ಲಿಂಗಪತ್ತೆ ತಡೆಗಟ್ಟಿ: ನ್ಯಾ. ಸಾವಿತ್ರಿ
ಕನ್ನಡಪ್ರಭ ವಾರ್ತೆ, ಹಾವೇರಿ, ಜ. 28
ಇತ್ತೀಚೆಗೆ ಹೆಣ್ಣು ಮಕ್ಕಳ ಅನುಪಾತ ಗಣನೀಯವಾಗಿ ಕುಸಿಯುತ್ತಿರುವುದು ಆತಂಕಕಾರಿ ಸಂಗತಿ. ಇದರಿಂದ ಸಮಾಜದ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಹೆಣ್ಣು ಭ್ರೂಣ ಹತ್ಯೆಯೇ ಪುರುಷ -ಮಹಿಳೆಯರ ಅನುಪಾತ ಕಡಿಮೆಯಾಗಲು ಕಾರಣ. ಇದನ್ನು ತಡೆಗಟ್ಟಲು ತರಬೇತಿ ನಿರತ ನೌಕರರು ಜನಸಮುದಾಯದಲ್ಲಿ ಹೆಚ್ಚು ತಿಳಿವಳಿಕೆ ಮೂಡಿಸಬೇಕು. ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆಯುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಹೆಚ್ಚಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್. ಸಾವಿತ್ರಿ ವಿನಾಯಕ ಹೇಳಿದರು.
ಜಿಪಂ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸ್ತ್ರೀ ಭ್ರೂಣ ಹತ್ಯೆ ಕಾಯ್ದೆ ಕುರಿತಾದ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಪಿ ಎನ್. ಶಶಿಕುಮಾರ್, ಪುರುಷ-ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಲಿಂಗಪತ್ತೆ ಮಾಡಿದರೆ ಶಿಕ್ಷಾರ್ಹ ಅಪರಾಧದ ಕಾನೂನು ಜಾರಿಗೆ ತರಲಾಗಿದೆ ಎಂದರು.
ಜಿಪಂ ಸಿಇಒ ಕೆ.ಬಿ. ಆಂಜನಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ, ಡಿಎಚ್ಒ ಡಾ. ರಾಘವೇಂದ್ರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಎಂ. ಜುಂಜಣ್ಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಸವರಾಜ ಅಂಗಡಿ, ಹಿರಿಯ ಸಿವಿಲ್ ನ್ಯಾಯಾಧೀಶ ಚನ್ನಕೇಶವ ರೆಡ್ಡಿ, ನಗರಸಭೆಯ ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎಸ್.ಎಸ್. ಹಿರೇತನದ ಮಾತನಾಡಿದರು. ಸ್ತ್ರೀ ಭ್ರೂಣ ಹತ್ಯೆ ಕಾಯ್ದೆ ಕುರಿತು ವಿಶ್ರಾಂತ ಡಿಎಚ್ಒ ಡಾ. ಈಶ್ವರ ವೈ. ಮಾಳೋದೆ, ಡಾ. ರಾಜಕುಮಾರ ಮರೋಳ ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಎಸ್. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಡಿ.ಬಿ. ಮೂಲಿಮನಿ ಸ್ವಾಗತಿಸಿದರು. ಕಿರಿಯ ಆರೋಗ್ಯ ಸಹಾಯಕ ಶಂಕರ ಸುತಾರ ವಂದಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಫ್. ಕುರುವಳ್ಳಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

