ಪರಿಹಾರ: ನಾಲ್ಕನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ
ಹಾವೇರಿ: ಕಳಪೆ ಬಿಟಿ ಹತ್ತಿ ಬೀಜದಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಗುರುವಾರ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.
ನಾಲ್ಕನೇ ದಿನದ ಧರಣಿ ಸತ್ಯಾಗ್ರಹದಲ್ಲಿ ರಾಣಿಬೆನ್ನೂರು ತಾಲೂಕಿನ ದೇವರಗುಡ್ಡ ಹಾಗೂ ಮಡ್ಲೇರಿ ಭಾಗದ ರೈತರು ಧರಣಿಯಲ್ಲಿ ಭಾಗವಹಿಸಿದ್ದರು. ರೈತರು ಇಡೀ ದಿನ ಭಜನೆ, ರೈತ ಗೀತೆಗಳನ್ನು ಹಾಡಿ ಧರಣಿ ಸತ್ಯಾಗ್ರಹಕ್ಕೆ ಹುಮ್ಮಸ್ಸು ತುಂಬಿದರು.
ಗುರುವಾರ ಧರಣಿ ಸ್ಥಳಕ್ಕೆ ಸಂಯುಕ್ತ ಜನತಾದಳದ ರಾಜ್ಯಾಧ್ಯಕ್ಷ ಎಂ.ಪಿ. ನಾಡಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಕೋರಿಶೆಟ್ಟರ್ ಭೇಟಿ ನೀಡಿ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಎಂ.ಪಿ. ನಾಡಗೌಡ ಮಾತನಾಡಿ, ರಾಜ್ಯಾದ್ಯಂತ ರೈತರು ಕಬ್ಬಿಗೆ ಸೂಕ್ತ ಬೆಲೆ, ಹಾನಿಗೊಳಗಾದ ಬಿಟಿ ಹತ್ತಿಗೆ ಪರಿಹಾರ, ಬೆಳೆ ವಿಮೆ ಪರಿಹಾರ, ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರದ ನೂನ್ಯತೆಗಳ ವಿರುದ್ಧ ನಿತ್ಯವೂ ಪ್ರತಿಭಟನೆ ನಡೆಸುತ್ತಿದ್ದಾರೆ. ಇವಾವುಗಳ ಬಗ್ಗೆಯೂ ಗಮನಹರಿಸದೇ ಮೌನವಾಗಿದೆ ಎಂದು ಆರೋಪಿಸಿದರು. ಎಂ.ಎಸ್. ಕೋರಿಶೆಟ್ಟರ್, ರೈತರು ತಮ್ಮ ಪ್ರತಿಯೊಂದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆಯನ್ನು ರಾಜ್ಯ ಸರ್ಕಾರ ತಂದಿಟ್ಟಿರುವುದು ನಾಚಿಗೇಡಿನ ಸಂಗತಿ ಎಂದು ಕಿಡಿ ಕಾರಿದರು. ರೈತ ಮುಖಂಡರಾದ ರಾಮಣ್ಣ ಕೆಂಚಳ್ಳೇರ, ಶಿವಬಸಪ್ಪ ಗೋವಿ, ಸುರೇಶ ಚಲವಾದಿ, ಗಂಗಣ್ಣ ಎಲಿ, ಹನುಮಂತಪ್ಪ ಬಸರಿಹಳ್ಳಿ, ಶಿವನಗೌಡ ಪಾಟೀಲ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

