ಹಾವೇರಿ

ಬಿಜೆಪಿಯಿಂದ ನಮೋ ಟೀ ಸ್ಟಾಲ್

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಜ. 30
ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕದ ಕಾರ್ಯಕರ್ತರು ಗುರುವಾರ ನಗರದಲ್ಲಿ ನಮೋ ಚಾಯ್ ಸ್ಟಾಲ್ ಪ್ರಾರಂಭಿಸಿ ಕೇಂದ್ರದ ಮಾಜಿ ಸಚಿವ ಮಣಿಶಂಕರ ಅಯ್ಯರ್ ಹೇಳಿಕೆಗೆ ಪ್ರತ್ಯುತ್ತರ ನೀಡಿದರು.
ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಗೀತಾ ಜೂಜಗಾಂವ ಉದ್ಘಾಟಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರದೀಪ ಮುಳ್ಳೂರ ಮಾತನಾಡಿ, ಬಿಜೆಪಿಯವರು ಚಹಾ ಮಾರಿ ದೇಶ ಕಟ್ಟುತ್ತಾರೆ. ಕಾಂಗ್ರೆಸ್‌ನವರು ದೇಶ ಮಾರಿ ಬದುಕುತ್ತಿದ್ದಾರೆ. ನರೇಂದ್ರ ಮೋದಿ ಅವರೊಬ್ಬರೆ ಅಲ್ಲದೇ ಬಿಜೆಪಿಯ ಎಲ್ಲ ಕಾರ್ಯಕರ್ತರು ಚಹಾ ಮಾರುವ ಮೂಲಕ ಕೇಂದ್ರ ಮಾಜಿ ಸಚಿವ ಮಣಿಶಂಕರ ಅಯ್ಯರ್ ಅವರ ಹೇಳಿಕೆಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಕಾಂಗ್ರೆಸ್ ನಾಯಕರ ಹೇಳಿಕೆ ಖಂಡಿಸಿದರು.
ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋಮೇಶ್ವರ ಕುರ್ಡೇಕರ, ನಗರ ಘಟಕದ ಅಧ್ಯಕ್ಷ ವೆಂಕಟೇಶ ದೈವಜ್ಞ, ಮಧುಕರ ನವಲೆ, ಪ್ರಭು ಹಿಟ್ನಳ್ಳಿ, ಜ್ಯೋತಿ ಸಾತೇನಹಳ್ಳಿ, ಫಕ್ಕೀರಪ್ಪ ತಾಂಡೂರ, ಕರಬಸಪ್ಪ ಹಳದೂರ, ಲಲಿತಾ ಗುಂಡೇನಹಳ್ಳಿ, ನಜಬುನ್ನಿಸಾ ನದಾಫ್, ಚೇತನ ಕುರುಬಗೊಂಡ, ಕೆ.ಸಿ. ಕೋರಿ, ಸುರೇಶ ಹೊಸಮನಿ, ಸಾಗರ ಅಂಗಡಿ ಇತರರು ಇದ್ದರು. ಸಾರ್ವಜನಿಕರಿಗೆ ಟೀ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.