ಮಹಿಳೆ, ಮಕ್ಕಳ ಸಾಗಾಟ ವಿರುದ್ಧ ಜಾಗೃತರಾಗಿ
ಕನ್ನಡಪ್ರಭ ವಾರ್ತೆ, ಹಾನಗಲ್ಲ, ಜ. 30
ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗೆ ಸರ್ಕಾರ ಕಠಿಣ ಕಾನೂನು ರೂಪಿಸಿದ್ದರೂ ಸಮಸ್ಯೆ ಪರಿಹಾರ ಸಾಧ್ಯವಾಗಿಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿದರೆ ಮಾತ್ರ ಇದನ್ನು ತಡೆಯಬಹುದು ಎಂದು ಶಾಸಕ ಮನೋಹರ ತಹಶೀಲ್ದಾರ್ ಅಭಿಪ್ರಾಯಪಟ್ಟರು.
ನಗರದದ ಸ್ತ್ರೀಶಕ್ತಿ ಭವನದಲ್ಲಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ, ಪ್ರಗತಿ ಸ್ವ ಸಹಾಯ ಸಂಘ ಹಾಗೂ ಕಾಣೆಯಾದ ಮಕ್ಕಳ ಬ್ಯೂರೋ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ವಿರುದ್ಧ ಬೃಹತ್ ಅಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಡತನ, ಅನಕ್ಷರತೆ, ದುರಾಸೆ, ಹಸಿವು, ಅಜ್ಞಾನ ಹಾಗೂ ಮೂಢನಂಬಿಕೆಗಳಿಗೆ ಮಹಿಳೆಯರು ಮತ್ತು ಮಕ್ಕಳು ಬಲಿಯಾಗುತ್ತಿದ್ದಾರೆ. ಬಣ್ಣದ ಮಾತುಗಳಿಗೆ ಮರುಳಾದ ಮಹಿಳೆಯರು ವೇಶ್ಯಾವಾಟಿಕೆಗೆ ಬಳಕೆಯಾಗುತ್ತಿದ್ದಾರೆ. ಮಕ್ಕಳನ್ನು ಕೊಂಡವರು ಅವರನ್ನು ಅಂಗವಿಕಲರನ್ನಾಗಿ ಮಾಡಿ, ಭಿಕ್ಷಾಟನೆಗೆ ಒಳಪಡಿಸುತ್ತಾರೆ. ಮೋಸ ಹೋದವರು ಜೀವನ ಪರ್ಯಂತ ಈ ವಿಷ ವರ್ತುಲದಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದರು.
ತಾಪಂ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರು ಅಧ್ಯಕ್ಷತೆ ವಹಿಸಿದ್ದರು. ತಾಪಂ ಉಪಾಧ್ಯಕ್ಷೆ ಅನಿತಾ ಶಿವೂರ, ಸದಸ್ಯರಾದ ವಿಜಯಾ ಹಿರೇಮಠ, ಮಧು ಪಾಣಿಗಟ್ಟಿ, ರಾಜೇಂದ್ರ ಬಾರ್ಕಿ, ಜಿಪಂ ಸದಸ್ಯರಾದ ಗೀತಾ ಅಂಕಸಖಾನಿ, ಮಹದೇವಪ್ಪ ಬಾಗಸರ, ಕಸ್ತೂರೆವ್ವ ವಡ್ಡರ, ಬಸವರಾಜ ಹಾದಿಮನಿ, ಪುರಸಭಾ ಸದಸ್ಯರಾದ ಮಖಬೂಲ ಸರ್ವಿಕೇರಿ, ಮಹಮ್ಮದ ಕೇಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭು ಸುಣಗಾರ, ರಾಜಶೇಖರ ಸಾಲಿಮಠ ಇದ್ದರು.
ನ್ಯಾಯವಾದಿ ವೀಣಾ ಬಿ. ಬ್ಯಾತನಾಳ ಮಹಿಳಾ ದೌರ್ಜನ್ಯ ತಡೆಗಟ್ಟುವ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.
ಹಾವೇರಿಯ ಸ್ಪೀಡ್ ಸಂಸ್ಥೆ ಕಾರ್ಯಕರ್ತರು ಬೀದಿ ನಾಟಕ ಪ್ರದರ್ಶಿಸಿದರು. ಸಿಡಿಪಿಒ ಬಿ.ಆರ್. ಶೆಟ್ಟರ್ ಪ್ರಾಸ್ತಾವಿಕ ಮಾತನಾಡಿದರು. ಶಿವಲೀಲಾ ಕ್ಯಾಡಿ ನಿರ್ವಹಿಸಿದರು.
ಜಾಗೃತಿಗೆ ಸೈಕಲ್ ಜಾಥಾ: ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ವಿರುದ್ಧ ಬೃಹತ್ ಅಂದೋಲನ ಅಂಗವಾಗಿ ಸಂಘಟಿಸಲಾಗಿದ್ದ ಜನ ಜಾಗೃತಿ ಸೈಕಲ್ ಜಾಥಾಕ್ಕೆ ಸೋಮವಾರ ಬೆಳಗ್ಗೆ ನಗರದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ದಿವಾಣಿ ನ್ಯಾಯಾಧೀಶ ಎಂ. ರಾಮಚಂದ್ರ, ಕಿರಿಯ ವಿಭಾಗದ ನ್ಯಾಯಾಧೀಶ ಮಧ್ವೇಶ ಡಬೇರ ಹಾಗೂ ತಹಸೀಲ್ದಾರ್ ಡಾ ನಾಗೇಂದ್ರ ಹೊನ್ನಳ್ಳಿ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

