ಮೂಲ ಜನಪದ ಕಲೆ, ಸಂಸ್ಕೃತಿ ಉಳಿಸಿಕೊಳ್ಳಿ
ಶಿಗ್ಗಾಂವಿ: ಮೂಲ ಜನಪದ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಉಳಿಸಿಕೊಳ್ಳುವ ಹೆಚ್ಚಿನ ಜವಾಬ್ದಾರಿ ಕಲಾವಿದರ ಮೇಲಿದೆ ಎಂದು ಕೋಲಾರ ಜಿಲ್ಲೆಯ ಮಾಲೂರಿನ ಖ್ಯಾತ ಜನಪದ ಗಾಯಕ ಪಿಚ್ಚಳ್ಳಿ ಶ್ರೀನಿವಾಸ ಅಭಿಪ್ರಾಯಪಟ್ಟರು.
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಾಗಂದಿಗೆ ವೇದಿಕೆಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ತಿಂಗಳ ಅತಿಥಿಯೊಂದಿಗೆ ಪಟ್ಟಾಂಗ-15 ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಜಾಗತೀಕರಣದ ಸಂದರ್ಭದಲ್ಲಿ ಮೂಲ ಜನಪದ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಗಳು ಕಳೆದು ಹೋಗುತ್ತಿವೆ. ಇಂತಹ ಸಂದಿಗ್ಧತೆಯಲ್ಲಿಯೂ ಬಾಳಿ-ಬದುಕುತ್ತಿರುವ ಕಲಾವಿದರು, ಲಾಭದ ಆಸೆಗೆ ಒಳಗಾಗದೇ ಮೂಲ ಜನಪದ ಕಲೆ ಉಳಿಸಿಕೊಳ್ಳಲು ಅಚಲವಾದ ನಿರ್ಧಾರ ಮತ್ತು ನಿಷ್ಠೆ ತೋರಬೇಕು. ಅಂದಾಗ ಮಾತ್ರ ನಮ್ಮ ಪರಂಪರಾಗತ ಕಲೆಗಳು ಉಳಿಯಲು ಸಾಧ್ಯ ಎಂದು ಪ್ರತಿಪಾದಿಸಿದರು.
ಕಾರ್ಯ ಅಭಿನಂದನಾರ್ಹ: ನಾಡಿನ ಎಲ್ಲ ಪ್ರದೇಶದ ಎಲ್ಲ ಪ್ರಕಾರಗಳ ಜನಪದ ಕಲಾವಿದರನ್ನು ಆಹ್ವಾನಿಸುವ ಮೂಲಕ ಜಾನಪದ ವಿವಿಯು ನಿಜವಾದ ಅರ್ಥದಲ್ಲಿ ಮೂಲ ಜನಪದ ಸಂಸ್ಕೃತಿ ಉಳಿಸಿ, ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದು ಅಭಿನಂದನಾರ್ಹ ಕಾರ್ಯ ಎಂದು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಂಬಳಿಕೆ ಹಿರಿಯಣ್ಣ ಮಾತನಾಡಿ, ಮೂಲ ಕಲಾವಿದರಿಂದಲೇ ಜನಪದ ಕಲೆಗಳು ಉಳಿದು, ಬೆಳೆಯಲು ಸಾಧ್ಯ. ಈ ಹಿನ್ನೆಲೆಯಲ್ಲಿ ಮೂಲ ಕಲಾವಿದರಲ್ಲಿ ಅವರ ಬದುಕಿನ ಭಾಗವಾಗಿರುವ ಕಲೆಗಳ ಬಗ್ಗೆ ನಿಷ್ಠೆ ಮತ್ತು ಆತ್ಮ ವಿಶ್ವಾಸವನ್ನು ಮೂಡಿಸುವುದೇ ವಿಶ್ವವಿದ್ಯಾಲಯದ ಮಹತ್ವದ ಉದ್ದೇಶವಾಗಿದೆ ಎಂದು ತಿಳಿಸಿದರು. ಪಿಚ್ಚಳ್ಳಿ ಶ್ರೀನಿವಾಸ ಅವರ ನೇತೃತ್ವದ ತಂಡದ ವೆಂಕಟೇಶ್, ಮಂಜು, ನಾಗರಾಜ, ಶ್ರೀ ರವಿ ಜನಪದ ಗೀತೆಗಳನ್ನು ಹಾಡಿದರು. ಇದೇ ಸಂದರ್ಭದಲ್ಲಿ ಜನಪದ ಗಾಯಕರಾದ ಪಿಚ್ಚಳ್ಳಿ ಶ್ರೀನಿವಾಸ ಅವರನ್ನು ವಿಶ್ವವಿದ್ಯಾಲಯದ ವತಿಯಿಂದ ಸನ್ಮಾನಿಸಲಾಯಿತು. ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಡಿ.ಬಿ. ನಾಯಕ, ಮೌಲ್ಯಮಾಪನ ಕುಲಸಚಿವ ಮತ್ತು ವಿಸ್ತರಣೆ ಹಾಗೂ ಸಲಹಾ ಕೇಂದ್ರದ ನಿರ್ದೇಶಕ ಪ್ರೊ. ಸ.ಚಿ. ರಮೇಶ, ಹಿರಿಯ ಸಂಶೋಧನಾ ಅಧಿಕಾರಿ ಡಾ. ಕೆ.ಪ್ರೇಮಕುಮಾರ, ಎಂಬಿಎ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ. ಚಂದ್ರ ಪೂಜಾರಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ ಕೆ.ಎನ್. ಚಂದು ಹಾಗೂ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.
ಕೆ.ಎಲ್. ಲಕ್ಷ್ಮಣ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ಯತೀಶ್.ಎಲ್. ಕೊಡಾವತ್ ಸ್ವಾಗತಿಸಿದರು. ವಿಜಯಲಕ್ಷ್ಮೀ ಗೇಟಿಯವರ ನಿರೂಪಿಸಿದರು. ಎಚ್.ಕೆ ಅರುಣಕುಮಾರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

