ಹಾವೇರಿ

ರಕ್ತದಾನ ಶ್ರೇಷ್ಠ: ಮಂಜುನಾಥ

Published On :

ಹಾವೇರಿ: ಯಾವುದೇ ವ್ಯಕ್ತಿಯಾಗಲಿ ಪರೋಪಕಾರ ಬಯಸಬೇಕು. ಅಪಾಯದಂಚಿನಲ್ಲಿರುವ ಇನ್ನೊಬ್ಬ ವ್ಯಕ್ತಿಯ ಜೀವ ಕಾಪಾಡಲು ಹಾತೊರೆಯಬೇಕು. ದಾನಗಳಲ್ಲಿ ಶ್ರೇಷ್ಠವಾದದ್ದು ರಕ್ತದಾನ. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಬಹುದು. ಸ್ವಯಂ ಪ್ರೇರಿತರಾಗಿ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ರಕ್ತದಾನ ಮಾಡುವುದು ಪುಣ್ಯದ ಕೆಲಸ ಎಂದು ಜಿಲ್ಲಾಧಿಕಾರಿ ಮಂಜುನಾಥ ನಾಯಕ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆ ಜಿ.ಎಚ್. ಕಾಲೇಜಿನಲ್ಲಿ ವಿವಿಧ ಇಲಾಖೆ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನ ಶಿಬಿರ, ತಾಯಂದಿರ ಉಳಿವಿಗಾಗಿ ಸುರಕ್ಷಿತ ರಕ್ತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಶುದ್ಧ ರಕ್ತದ ಅವಶ್ಯಕತೆ ಬಹಳಷ್ಟಿದ್ದು, ರಕ್ತ ನೀಡುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಪರೋಪಕಾರದಂತಹ ಮನೋಭಾವನೆ ಇಂದಿನ ಯುವಕರಲ್ಲಿ ಮೂಡದಿರುವುದು ನೋವಿನ ವಿಚಾರ. ಒಂದು ಜೀವ ಉಳಿಸಲು ಪ್ರತಿಯೊಬ್ಬರೂ ಮುನ್ನಡೆಯಬೇಕು. ಭಾರತದ ಭವಿಷ್ಯ ನಿರ್ಮಾತೃಗಳಾದ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಸನ್ನದ್ಧರಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಪಂ ಸಿಇಒ ಕೆ.ಬಿ. ಆಂಜನಪ್ಪ ಮಾತನಾಡಿ, ಪ್ರತಿ ತಾಯಂದಿರಿಗೂ ಹೆರಿಗೆ ಸಂದರ್ಭ ರಕ್ತದ ಅವಶ್ಯಕತೆಯಿದ್ದು, ಪ್ರತಿಯೊಬ್ಬರು ರಕ್ತದಾನ ಮಾಡಲು ಮುಂದಾಗಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ರೂವಾರಿಗಳಾದ ಶಾಲಾ-ಕಾಲೇಜುಗಳ ಶಿಕ್ಷಕರು ಜಾಗೃತಿ ಜಾಥಾ ಮಾಡುವ ಅವಶ್ಯಕತೆ ಇದೆ ಎಂದರು.
ಕಾಲೇಜು ಪ್ರಾಚಾರ್ಯ ಎಸ್.ಬಿ. ನಾಡಗೌಡ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚು ಬಾರಿ ರಕ್ತದಾನ ಮಾಡಿದ ಪ್ರದೀಪ್, ಅಶೋಕ ಮತ್ತು ಸಂಜೀವ್ ದೇಶಪಾಂಡೆ ಅವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.