ಹಾವೇರಿ

ಶಿಕ್ಷಣ ಕ್ಷೇತ್ರದ ಸೇವೆ ತೃಪ್ತಿ ನೀಡಿದೆ

Published On :

ಕನ್ನಡಪ್ರಭ ವಾರ್ತೆ, ಹಾನಗಲ್ಲ, ಜು. 17
ತಾಲೂಕಿನ ಬೈಚವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಕನ್ನಡ ಸಹ ಶಿಕ್ಷಕ ಶಿವರಾಯಪ್ಪ ಹನುಮಂತಪ್ಪ ಶೀಮಂಡನವರ ದಂಪತಿಯನ್ನು ಗ್ರಾಮಸ್ಥರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹೃದಯಸ್ಪರ್ಶಿಯಾಗಿ ಸನ್ಮಾನಿಸಿ, ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಎಸ್.ಎಚ್. ಶೀಮಂಡನವರ, ಶಿಕ್ಷಕರಾಗಿ ಸೇವೆ ಸಲ್ಲಿಸುವುದೇ ಶ್ರೇಷ್ಠವಾಗಿದ್ದು, ಶಿಕ್ಷಕರಿಗೆ ಸಿಗುವ ಪ್ರೀತಿ, ಗೌರವ, ಅಪಾರ ಶಿಷ್ಯಬಳಗ ಬೇರೆ ಯಾವ ಇಲಾಖೆಯಲ್ಲೂ ಹೊಂದಲು ಸಾಧ್ಯವಿಲ್ಲ. ತಾವು ಶಿಕ್ಷಣ ಕ್ಷೇತ್ರದಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ ತೃಪ್ತಿ ಇದೆ. ತಮ್ಮ ಸೇವಾವಧಿಯಲ್ಲಿ ಸಹಕಾರ ನೀಡಿದ ಅಧಿಕಾರಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರನ್ನು ಸ್ಮರಿಸಿದರು.
ಪ್ರತಿಯೊಬ್ಬ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಕಾರ್ಯ ಮಾಡಬೇಕು. ಸನ್ಮಾನ ಹಾಗೂ ಪ್ರಶಸ್ತಿಗಳಿಗಾಗಿ ಪೈಪೋಟಿ ನಡೆಸದೇ ಶಿಕ್ಷಣದ ಪ್ರಗತಿಗೆ ಪ್ರಾಮಾಣಿಕವಾದ ಕಾಳಜಿ ವಹಿಸಬೇಕೆಂದು ಸಲಹೆ ನೀಡಿದರು.
ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಎನ್.ಟಿ. ದುರುಗಣ್ಣನವರ ಮಾತನಾಡಿ, ಪ್ರತಿಯೊಂದು ಮಗು ತನ್ನದೇ ಆದ ವಿಶೇಷತೆ ಹೊಂದಿರುತ್ತದೆ. ಆ ಮಗುವಿನಲ್ಲಿರುವ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ, ಪ್ರೋತ್ಸಾಹ ನೀಡುವ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಗಮನಹರಿಸಬೇಕು. ಇದಕ್ಕೆ ಪೋಷಕರು ಸಹಕಾರ ನೀಡಿ ಮಕ್ಕಳ ಉತ್ತಮ ಭವಿಷ್ಯ ರೂಪಿಸುವುದಕ್ಕೆ ನೆರವಾಗಬೇಕು ಎಂದರು.
ಎಸ್‌ಡಿಎಂಸಿ ಉಪಾಧ್ಯಕ್ಷ ಮಹೇಶ ನೆಗಳೂರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರಾದ ಉಮೇಶ ದಾನಪ್ಪನವರ, ಮಂಜಪ್ಪ ಹಾನಗಲ್ಲ, ರಾಮಚಂದ್ರಪ್ಪ ಚಿಕ್ಕೇರಿ, ನೌಕರ ಸಂಘದ ಉಪಾಧ್ಯಕ್ಷ ಗುರುರಾಜ ಹುಚ್ಚಣ್ಣನವರ, ಮಹಾರಾಜಪೇಟೆ ಮುಖ್ಯಶಿಕ್ಷಕ ಟಿ.ಆರ್. ವೇದಂಭಟ್ಟನವರ, ಮಹೇಶ ನಾಯ್ಕ, ಸಿ.ಕೆ. ನಿವೇದಿತ, ಎಸ್.ಎಂ. ಗೌಡರ, ಡಿ. ನಾಗರಾಜ, ಬಿ.ಆರ್. ಕುಲಕರ್ಣಿ, ಶಿದ್ದಪ್ಪ ಜೋಗಿ, ಜಿ.ಎಸ್. ಗಣಿ, ಆರ್.ಆರ್. ಪವಾರ ಸೇರಿದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.