ಹಾವೇರಿ

ಪರಿಸರ ಶುಚಿತ್ವದಿಂದ ಉತ್ತಮ ಆರೋಗ್ಯ

Published On :

ಹಿರೇಕೆರೂರು:ಪ್ರತಿಯೊಬ್ಬರೂ ಮನೆ ಸುತ್ತ ಇರುವ ಪರಿಸರವನ್ನು ಶುಚಿಯಾಗಿಟ್ಟುಕೊಂಡು ಉತ್ತಮ ಆರೋಗ್ಯ ಪಡೆಯಲು ಮುಂದಾಗಬೇಕು. ಮಲೇರಿಯಾ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರೊಂದಿಗೆ ಆರೋಗ್ಯವಂತರಾಗಬೇಕು ಎಂದು ವೈದ್ಯಾಧಿಕಾರಿ ಡಾ. ರಾಜೇಶ್ವರ ಚೆನ್ನಗೌಡ್ರ ತಿಳಿಸಿದರು. ಅವರು ತಾಲೂಕಿನ ಕೋಡ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಜರುಗಿದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ದಿನಗಳಲ್ಲಿ ಪರಿಸರ ಕಲುಷಿತಗೊಂಡು ಹಾಗೂ ಕಲುಷಿತ ನೀರನ್ನು ಬಳಸುವುದರಿಂದ ಅನೇಕ ಮಾರಕ ರೋಗಗಳು ಅಂಟಿಕೊಳ್ಳುತ್ತಿರುವುದರಿಂದ ಮಲೇರಿಯಾದಂತಹ ರೋಗಗಳು ಹರಡುವ ಮುನ್ನವೇ ಪ್ರತಿಯೊಬ್ಬರೂ ಸ್ವಚ್ಛತೆ ಮೂಲಕ ಆರೋಗ್ಯವಂಥರಾಗಬೇಕು ಎಂದರು.  ಹಿರಿಯ ಪುರುಷ ಆರೋಗ್ಯ ಸಹಾಯಕ ಎಸ್.ವಿ. ವಡ್ಡಿನಕಟ್ಟಿ ಉಪನ್ಯಾಸ ನೀಡಿದರು. ಸಹಾಯಕ ಎಲ್.ಎಸ್. ಮಾರೇರ ಮಲೇರಿಯಾ ಮಾಸಾಚರಣೆ ಕುರಿತು ವಿವರಿಸಿದರು. ಗ್ರಾಪಂ ಅಧ್ಯಕ್ಷೆ ವಾಸವಾಂಬ ಬಿಜಾಪುರ ಅಧ್ಯಕ್ಷತೆ ವಹಿಸಿದ್ದರು. ಎಂ.ಎಫ್. ಕಬ್ಬಾರ ಸ್ವಾಗತಿಸಿದರು. ಜಿ. ಶಶಿಕಲಾ ವಂದಿಸಿದರು. ಎಂ.ಎಂ. ಮಾಳಗಿ ನಿರೂಪಿಸಿದರು.

ಹಾವೇರಿ: ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹಾವೇರಿ: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಹಾವೇರಿ ನಗರದಲ್ಲಿ ನಡೆಯುತ್ತಿರುವ 6 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಜು.15ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ಅರ್ಜಿಯೊಂದಿಗೆ ಕಳೆದ ಸಾಲಿನ ತೇರ್ಗಡೆಯಾದ ಅಂಕಪಟ್ಟಿ, ಆದಾಯ ಮತ್ತು ಜಾತಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗಾಗಿ ವಿಸ್ತರಣಾಧಿಕಾರಿಗಳು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾವೇರಿ ಇವರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಅವಕಾಶ
ಹಾವೇರಿ: ಕರ್ನಾಟಕ ಮುದ್ರಾಂಕ ನಿಯಮಾವಳಿ-2013 ನಿಯಮ 5(2)ರ ಮೇರೆಗೆ ಹಾನಗಲ್ಲ ತಾಲೂಕಿನ ಸ್ಥಿರಾಸ್ತಿಗಳ ಮೌಲ್ಯಮಾಪನ ಉಪಸಮಿತಿಯು ಪ್ರಸಕ್ತ ಸಾಲಿನ ಹಾನಗಲ್ಲ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಬೆಲೆ ನಿರ್ಧರಿಸಬೇಕಾಗಿದೆ. ಸಾರ್ವಜನಿಕರು ಈ ಕುರಿತು ಸಲಹೆ ಮತ್ತು ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ 15 ದಿನಗಳೊಳಗಾಗಿ ಉಪನೋಂದಣಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು, ಮೌಲ್ಯ ಮಾಪನ ಉಪ ಸಮಿತಿ ಹಾನಗಲ್ಲ ಇವರ ಕಾರ್ಯಾಲಯದಲ್ಲಿ ಲಿಖಿತವಾಗಿ ಸಲ್ಲಿಸಬಹುದೆಂದು ಹಾನಗಲ್ಲ ಉಪ ನೋಂದಣಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳೆವಿಮೆ ಪ್ರಯೋಜನ ಪಡೆಯಲು ರೈತರಿಗೆ ಸಲಹೆ
ಹಾವೇರಿ: ಪ್ರಸಕ್ತ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಹಾಗೂ ಮಾರ್ಪಡಿಸಿದ ರಾಷ್ಟ್ರೀಯ ಕೃಷಿ ವಿಮಾ ಯೋಜನೆಗಳ ಅಡಿಯಲ್ಲಿ ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಲೀಡ್ ಬ್ಯಾಂಕ್ ತಿಳಿಸಿದೆ. ವಿಮೆ ಅಳವಡಿಸುವ ರೈತರು ಇತರೆ ದಾಖಲಾತಿಗಳೊಂದಿಗೆ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಯಾವುದೇ ದೃಢೀಕರಣ ಪತ್ರ ಲಗತ್ತಿಸುವ ಅವಶ್ಯಕತೆ ಇರುವುದಿಲ್ಲ. ಸ್ವಯಂ ಘೋಷಣಾ ಪತ್ರ ಲಗತ್ತಿಸಬೇಕು. ಎನ್‌ಇಎಫ್‌ಟಿ ವಿವರಗಳನ್ನು ನಮೂದಿಸುವುದು ಕಡ್ಡಾಯವಲ್ಲ. ಈ ಬಗ್ಗೆ ಈಗಾಗಲೇ ಜಿಲ್ಲೆಯ ಬೆಳೆ ಸಾಲ ವಿತರಿಸುವ ಎಲ್ಲ ಬ್ಯಾಂಕ್ ಶಾಖೆಗಳು, ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಮಾಹಿತಿ ರವಾನಿಸಲಾಗಿದೆ. ರೈತ ಬಾಂಧವರು ರಾಷ್ಟ್ರ ಮಟ್ಟದ ಈ ಬೆಳೆ ವಿಮೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯೋಜನೆಯ ಪ್ರಯೋಜನೆಯನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.