ಹಾವೇರಿ

ನಾಯಕತ್ವ ಗುಣ ಬೆಳೆಸಲು ಕ್ರೀಡೆ ಸಹಾಯಕ: ಸಲೀಂ ಅಹಮ್ಮದ್

Published On :

ಹಾವೇರಿ: ಉತ್ತಮ ಸಮಾಜ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ನಾಯಕತ್ವ ಗುಣ ಬೆಳೆಸುವಲ್ಲಿ ಕ್ರೀಡೆಗಳು ಸಹಾಯಕ ಎಂದು ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಮಹಾನಿರ್ದೇಶಕ  ಸಲೀಂ ಅಹಮ್ಮದ್ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಜಿಲ್ಲಾ ಯುವ ಸಮಾವೇಶ ಉದ್ಘಾಟಿಸಿ ವಿಶೇಷ ಅನುದಾನದಲ್ಲಿ ಮಂಜೂರಾದ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು. ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಅದಕ್ಕಾಗಿ ಎಲ್ಲರಿಗೂ ಕ್ರೀಡೆಗಳು ಹೆಚ್ಚು ಸಹಾಯಕವಾಗಿವೆ. ಗ್ರಾಮೀಣ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರ ಮೂಲಕ ಕ್ರೀಡಾ ಸಾಮಗ್ರಿಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಂದಿನ ಯುವಕರೇ ನಾಳೆಯ ನಾಯಕರು. ಆದ್ದರಿಂದ ಉತ್ತಮ ನಾಯಕತ್ವ ಗುಣಗಳನ್ನು ಇಂದಿನಿಂದಲೇ ಮೈಗೂಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಮಹಿಳಾ ಮಂಡಳಿಗಳನ್ನು ಸ್ಥಾಪನೆ ಮಾಡಿ ಗ್ರಾಮೀಣ ಭಾಗದ ಮಹಿಳೆಯರನ್ನು ಕ್ರೀಡೆಯಲ್ಲಿ ಭಾಗವಹಿಸಲು ಉತ್ತೇಜಿಸಲಾಗುವುದು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಕ್ರೀಡೆಗಳಿಗೆ ಇಂದು ಹೆಚ್ಚು ಅನುದಾನವನ್ನು ನೀಡುವ ಮೂಲಕ ಯುವಕರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿ ಯುವಕರನ್ನು ಅವಲಂಬಿಸಿದ್ದು, ಯುವಕರು ನಾಯಕತ್ವ ಗುಣಗಳನ್ನು ಅಳವಡಿಸಿಕೊಡು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸೇವೆ ಸಲ್ಲಿಸಲು ಮುಂದಾಗಬೇಕು ಎಂದರು. ನಗರಸಭೆ ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ, ಗಣೇಶ ಬಿಷ್ಠನಗೌಡ, ಜಯಶ್ರೀ ಶಿವಪುರ, ನಾರಾಯಣಗೌಡ್ರ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.