ಹಾವೇರಿ

ಆಯುಧ ಠೇವಣಿ ಇಡಲು ಸೂಚನೆ

Published On :

ಹಾವೇರಿ:  ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪರವಾನಗಿ ಪಡೆದ ಆಯುಧಗಳನ್ನು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಎಂ. ಮಂಜುನಾಥ ನಾಯಕ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಮತದಾನವು ಏ. 17ರಂದು ಜರುಗಲಿದ್ದು, ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವ ವರೆಗೆ ಜಿಲ್ಲಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಮುಕ್ತ ಮತದಾನ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಲೈಸನ್ಸ್ ಹೊಂದಿರುವ ಆಯುಧವುಳ್ಳವರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಕಡ್ಡಾಯವಾಗಿ ಡಿಪಾಜಿಟ್ ಮಾಡುವಂತೆ ಹಾಗೂ ಆಯುಧಗಳನ್ನು ಜೊತೆಗಿಟ್ಟುಕೊಂಡು ತಿರುಗಾಡುವುದನ್ನು ನಿಷೇಧಿಸಿದ್ದಾರೆ.
ಆದ್ದರಿಂದ ಲೈಸನ್ಸ್‌ದಾರರು ತಾವು ಹೊಂದಿರುವ ಆಯುಧಗಳನ್ನು ಪೊಲೀಸ್ ಠಾಣೆಯಲ್ಲಿ ಜಿಪಾಜಿಟ್ ಮಾಡಿದ ಬಗ್ಗೆ ಅಗತ್ಯ ಸ್ವೀಕೃತಿ ಪತ್ರ ಪಡೆದುಕೊಳ್ಳಬೇಕು. ಚುನಾವಣೆ ಪ್ರಕ್ರಿಯೆ ಮುಗಿದು ಫಲಿತಾಂಶ ಹೊರಬಿದ್ದ ಒಂದು ವಾರದ ನಂತರ ಹಿಂಪಡೆಯಬೇಕು. ಈ ಆದೇಶ  ಸರ್ಕಾರಿ ಸೇವೆಯಲ್ಲಿ ನಿರತರಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಅನ್ವಯಿಸುವುದಿಲ್ಲ. ಅಲ್ಲದೇ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳ, ಹಣಕಾಸು ಸಂಸ್ಥೆಗಳ ಸುರಕ್ಷತೆಗಾಗಿ ಪಡೆದುಕೊಂಡ ಲೈಸನ್ಸದಾರರಿಗೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸಿದವರನ್ನು ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಾಯ್ದೆ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.