ವಿಪತ್ತು ನಿರ್ವಹಣಾ ಸಮಿತಿ ಜತೆ ಸಾಕ್ಷರತಾ ಪ್ರೇರಕರು ಸಹಕರಿಸಿ
ರಾಣಿಬೆನ್ನೂರು: ವಿವಿಧ ಕಾರಣಗಳಿಂದ ಸಂಭವಿಸುವ ಅವಘಡಗಳಿಗೆ ವಿಪತ್ತುಗಳೆಂದು ಕರೆಯುತ್ತಿದ್ದು, ಅಂತಹ ಸಂದರ್ಭದಲ್ಲಿ ಸ್ಥಳಕ್ಕಾಗಮಿಸುವ ವಿಪತ್ತು ನಿರ್ವಹಣಾ ಸಮಿತಿಗೆ ಮಾಹಿತಿ ನೀಡುವುದರೊಂದಿಗೆ ಸಹಕರಿಸಲು ಸಾಕ್ಷರತಾ ಪ್ರೇರಕರು ಮುಂದಾಗಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಕೆ. ಕೃಷ್ಣಮೂರ್ತಿ ಕರೆ ನೀಡಿದರು.
ರಾಜ್ಯ ಸಾಕ್ಷರತಾ ಮಿಷನ್ ಪ್ರಾಧಿಕಾರ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ-ತಾಲೂಕು ಲೋಕ ಶಿಕ್ಷಣ ಸಮಿತಿ ತಾಲೂಕು ಪಂಚಾಯಿತಿ ರಾಣಿಬೆನ್ನೂರು ಸಂಯುಕ್ತಾಶ್ರಯದಲ್ಲಿ 2014-15ನೇ ಸಾಲಿನ ಸಾಕ್ಷರ ಭಾರತ ಯೋಜನೆಯ ಕಾರ್ಯಕ್ರಮಗಳ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷ ಸದಸ್ಯರಲ್ಲಿ ಅರಿವು ಮೂಡಿಸುವುದಕ್ಕಾಗಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಹಾಗೂ ತಾಲೂಕು ಲೋಕ ಶಿಕ್ಷಣ ಸಮಿತಿಯ ಸಂಯೋಜಕ ಆರ್.ಡಿ. ಹೊಂಬರಡಿ ಮಾತನಾಡಿದರು. ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕ ಹೋಬಾ ನಾಯ್ಕ, ಪ್ರಾಥಮಿಕ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಎಲ್.ಬಿ. ಬಡಿಗೇರ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಜೆ.ಎಂ. ಮಠದ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಎಲ್.ಎಚ್. ಮೂರಬ, ಪ್ರಧಾನ ಗುರುಗಳಾದ ಎಚ್.ಎಂ. ಐರಣಿ, ದೊಡ್ಮನಿ, ಎಂ ಬಸವನಗೌಡ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

