ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
ಹಾನಗಲ್ಲ: ಗ್ರಾಮೀಣ ಪ್ರದೇಶಗಳಲ್ಲಿ ರೈತರ ಕೃಷಿ ಪಂಪ್ಸೆಟ್ಗಳಿಗೆ ನಿರಂತರ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಸಬೇಕು ಎನ್ನುವ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿಲ್ಲ. ಇದರಿಂದ ತೋಟಗಾರಿಕಾ ಬೆಳೆಗಳ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಲಕ್ಷಾಂತರ ಮೌಲ್ಯದ ಬೆಳೆ ನಷ್ಟ ಸಂಭವಿಸುತ್ತಿದೆ ಎಂದು ಇಲ್ಲಿನ ಕೃಷಿ ಪಂಪ್ಸೆಟ್ ಬಳಕೆದಾರರ ಸಂಘ ದೂರಿದೆ.
ಈ ಕುರಿತು ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಪಾಟೀಲ ಸುದ್ದಿಗಾರರೊಂದಿಗೆ ಮಾತನಾಡಿ, ಕೃಷಿ ಪಂಪ್ಸೆಟ್ಗಳಿಗೆ ನಿರಂತರ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಇಂಧನ ಸಚಿವ ಡಿ.ಕೆ. ಶಿವಕುಮಾರ ನೀಡಿದ್ದರೂ ಆದೇಶವನ್ನು ಅಧಿಕಾರಿಗಳು ಸರಿಯಾಗಿ ಪಾಲಿಸುತ್ತಿಲ್ಲ.
ಈ ಭಾಗದಲ್ಲಿ ಪ್ರಮುಖ ತೋಟಗಾರಿಕಾ ಬೆಳಗಳಾದ ಅಡಕೆ, ಬಾಳೆ, ತೆಂಗು, ಮೆಣಸಿನಕಾಯಿ ಸೇರಿದಂತೆ ಇತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಹಾಯಿಸಲಾಗದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ತಕ್ಷಣವೇ ಅಧಿಕಾರಿಗಳು ಸರ್ಕಾರದ ಆದೇಶದಂತೆ ವಿದ್ಯುತ್ ಪೂರೈಸುವತ್ತ ಗಮನ ನೀಡುವಂತೆ ಒತ್ತಾಯಿಸಿದ್ದಾರೆ.
ತ್ರಿಫೇಸ್ ವಿದ್ಯುತ್ನ ಪೂರೈಕೆಗೆ ಅಧಿಕಾರಿಗಳು ನಿರ್ದಿಷ್ಟ ಅವಧಿ ಗೊತ್ತುಪಡಿಸಬೇಕು. ನಸುಕಿನಲ್ಲಿ ಬೇಗ ಪೂರೈಸುವುದರಿಂದ ಕಾರ್ಮಿಕರು ಕೃಷಿ ಭೂಮಿಗೆ ಹೋಗದೆ ತೊಂದರೆ ಉಂಟಾಗಿದ್ದು, ಬೆಳಗ್ಗೆ 7ರಿಂದ ತ್ರಿಫೇಸ್ ವಿದ್ಯುತ್ ಪೂರೈಕೆಗೆ ಗಮನ ನೀಡುವಂತೆ ಮನವಿ ಮಾಡಿರುವ ಅವರು ಸತತ 7 ಗಂಟೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ. ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ಈ ಕುರಿತು ಒಂದು ವಾರದ ಒಳಗಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

