ಹಾವೇರಿ

ಅನಕ್ಷರತೆ ತೊಲಗಿಸಲು ಸ್ತ್ರೀಯರು ಮುಂದಾಗಿ: ಪುಷ್ಪಾ

Published On :

ಹಿರೇಕೆರೂರು: ಎಲ್ಲ ಮಹಿಳೆಯರು ಸಾಕ್ಷರರಾಗುವುದರೊಂದಿಗೆ ದೇಶದಲ್ಲಿರುವ ಅನಕ್ಷರತೆ ತೊಲಗಿಸಲು ಮುಂದಾಗಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಪುಷ್ಪಾ ಕುಲಕರ್ಣಿ ಕರೆ ನೀಡಿದರು.
ತಾಲೂಕಿನ ಚಿಕ್ಕೇರೂರಿನ ಜೆಸಿಐ ಬನಶಂಕರಿ ವತಿಯಿಂದ ಯಲ್ಲಾಪುರ -ಚಿಕ್ಕೇರೂರಿನ ಜ್ಞಾನಗಂಗಾ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ ಮಹಿಳಾ ದಿನಾಚರಣೆ ನಿಮಿತ್ತ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಇದೇ ವೇಳೆ, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಹೊರಾಂಗಣ ಮತ್ತು ಒಳಾಂಗಣ ಕ್ರೀಡೆಗಳು, ರಸಪ್ರಶ್ನೆ, ಅಂತ್ಯಾಕ್ಷರಿ, ಎಳೆ ರಂಗೋಲಿ ಹಾಗೂ ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ಜಯಗಳಿಸಿದ ಸಾಧಕರಿಗೆ ಬಹುಮಾನ ವಿತರಿಸಲಾಯಿತು. ಪದ್ಮಾ ಅರುಣಕುಮಾರ ಶೆಟ್ಟರ್ ಅಧ್ಯಕ್ಷತೆ ವಹಿಸಿದ್ದರು. ಅರುಣಕುಮಾರ ಶೆಟ್ಟರ್, ಶಾರದಾ ಗೋಪಾಲ ಅರುಣರಾಜು ವಾಲಿಶೆಟ್ಟರ್, ವಸಂತ ದಂದೂರ ಮೊದಲಾದವರು ಉಪಸ್ಥಿತರಿದ್ದರು.
ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯರು, ಮಹಿಳಾ ಅರ್ಬನ್ ಬ್ಯಾಂಕಿನ ಸದಸ್ಯರು ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಚಿಕ್ಕೇರೂರು ಭಾಗದ ಶಿಕ್ಷಕಿಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.