ಹಾವೇರಿ

ದಲಿತ ಸಮಿತಿ ರ್ಯಾಲಿಗೆ 5 ಸಾವಿರ ಕಾರ್ಯಕರ್ತರು

Published On :

ಹಾವೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ವತಿಯಿಂದ ಮಾ. 15ರಂದು ಬೆಂಗಳೂರಿನಲ್ಲಿ 'ದಲಿತರ ನಡೆ ಸ್ವತಂತ್ರ ರಾಜಕೀಯದೆಡೆಗೆ' ರ್ಯಾಲಿ ಹಮ್ಮಿಕೊಂಡಿದ್ದು, ಜಿಲ್ಲೆಯಿಂದ 5 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ರಾಜ್ಯ ಸಂಘಟನಾ ಸಂಚಾಲಕ ವಾಸುದೇವ ಬಸವ್ವನವರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನ್ಸಿರಾಂ ಅವರ ಹುಟ್ಟು ಹಬ್ಬದ ಅಂಗವಾಗಿ ಈ ರ್ಯಾಲಿ ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಚಿಕ್ಕ ಲಾಲ್‌ಬಾಗ್‌ನಿಂದ ಮೆರವಣಿಗೆ ಹೊರಟು, ಫ್ರೀಡ್‌ಂ ಪಾರ್ಕ್‌ನಲ್ಲಿ ಮಧ್ಯಾಹ್ನ 2ಕ್ಕೆ ಬಹಿರಂಗ ಸಭೆ ನಡೆಸಲಿದೆ ಎಂದು ತಿಳಿಸಿದರು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತರನ್ನು ಕಡೆಗಣಿಸಿವೆ. ಅಲ್ಲದೆ ದಲಿತರನ್ನು ಕೇವಲ ವೋಟ್ ಬ್ಯಾಂಕಾಗಿ ಬಳಸಿಕೊಂಡಿವೆ. ದಲಿತರ ನಡೆ ಸ್ವತಂತ್ರ ರಾಜಕೀಯದೆಡೆಗೆ ರ್ಯಾಲಿ ಮೂಲಕ ದಲಿತ ಸಮುದಾಯದಲ್ಲಿ ಜಾಗೃತಿ, ದಲಿತರ ವಿಚಾರ, ಬೇಡಿಕೆಗಳ ಬಗ್ಗೆ ಸರ್ಕಾರದ ಕಣ್ಣು ತೆರೆಸಲಾಗುವುದು ಎಂದು ಹೇಳಿದರು. ಮಾ. 14ರಂದು ರಾತ್ರಿ ಜಿಲ್ಲೆಯ ಡಿಎಸ್‌ಎಸ್ ಕಾರ್ಯಕರ್ತರು ರೈಲು, ಸಾರಿಗೆ ಸಂಸ್ಥೆ ವಾಹನಗಳ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಮಿತಿ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿಬೇಕು ಎಂದು ಬಸವ್ವನವರ ಕೋರಿದರು. ಲೋಕಸಭೆ ಚುನಾವಣೆಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರ್ಯಾಲಿಯ ನಂತರ ಮುಖಂಡರ ಜತೆಗೆ ಚರ್ಚಿಸಿ ಮಾ. 15ರ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮಾಲತೇಶ ಯಲ್ಲಾಪುರ, ಖಜಾಂಚಿ ನಿಂಗಪ್ಪ ನಿಂಬಕ್ಕನವರ, ಬಸಣ್ಣ ದೊಡ್ಡಮನಿ, ತಾಲೂಕು ಸಂಚಾಲಕ ಬೈಲಪ್ಪ ದಾಸಪ್ಪನವರ, ಮಲ್ಲೇಶ ಮಾದರ, ಬಸವರಾಜ ಕ್ಯಾಲಕೊಂಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.