ಆಸೆ, ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಿ
ಹಾವೇರಿ: ನಾವು ಯಾವುದೇ ಆಸೆ ಆಮಿಷಗಳಿಗೆ ಒಳಗಾಗುವುದಿಲ್ಲ, ನಮ್ಮ ಮತ ಮಾರಾಟಕ್ಕಿಲ್ಲ ಎಂದು ಎಲ್ಲ ಮತದಾರರು ಎದೆತಟ್ಟಿ ಹೇಳಬೇಕೆಂದು ಸಮಖ್ಯ ಸಂಸ್ಥೆಯ ರಾಜ್ಯ ಸಂಯೋಜಕಿ ಆರತಿ ಸಬರದ ಹೇಳಿದರು. ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯಲ್ಲಿ ಏರ್ಪಡಿಸಲಾಗಿದ್ದ ಸ್ವೀಪ್ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಸಂಯೋಜಕರು ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ಕುರಿತು ಅಭಿಪ್ರೇರಣಾ ಶಿಬಿರದಲ್ಲಿ ಮಾತನಾಡಿದರು. ಸಾಕ್ಷರತಾ ಜಿಲ್ಲಾ ಸಂಯೋಜಕ ಎಲ್.ಯು. ನಾಯ್ಕರ್ ಮಾತನಾಡಿ, ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕು. ತಪ್ಪದೇ ಮತ ಚಲಾಯಿಸಬೇಕೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ ಐ.ಎ. ಲೋಕಾಪುರ ಮಾತನಾಡಿ, ಮತದಾನ ಸಾಕ್ಷರತೆ ಅಕ್ಷರ ಆಂದೋಲನದ ಒಂದು ಅಂಗ. ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಿ, ಜಿಲ್ಲೆಯ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಎಲ್ಲ ಪ್ರೇರಕರು ಹಾಗೂ ಸ್ವಯಂ-ಸೇವಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ತಿಳಿಸಿದರು. ಸಮಖ್ಯ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ರೇಣುಕಾ ತ್ರಿಪಾಠಿ, ಕಾರ್ಯಕ್ರಮ ಸಹಾಯಕ ಚಂದ್ರಕಾಂತ ಕುಸನೂರ, ಜಿಲ್ಲಾ ಸಂಯೋಜಕಿ ಕವಿತಾ ಎಸ್., ಎಚ್.ಎಸ್. ಬೂದಿಹಾಳ್, ತಾಲೂಕು ಸಂಯೋಜಕ ಬಿ.ಎಂ. ಅಂಗಡಿ, ಎಚ್.ಎಫ್. ದ್ಯಾವನಗೌಡ ಉಪಸ್ಥಿತರಿದ್ದರು. ಹಾವೇರಿ ತಾಲೂಕು ಸಂಯೋಜಕಿ ಎಲ್ಲಮ್ಮ ಚಲವಾದಿ ಸ್ವಾಗತಿಸಿದರು, ಗುರು ಹರಣೇನವರ ವಂದಿಸಿದರು.
ಟಿಪ್ಪರ್ ಹಾಯ್ದು ಕಾರ್ಮಿಕ ಸಾವು
ಶಿಗ್ಗಾಂವಿ: ತಾಲೂಕಿನ ಬಂಕಾಪುರದಲ್ಲಿ ಟಿಪ್ಪರ್ ಹಾಯ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಸವಣೂರ ರಸ್ತೆ ಮೇಲೆ ಸೋಮವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿ ಹಾವೇರಿ ತಾಲೂಕಿನ ನೆಲೋಗಲ್ಲ ಗ್ರಾಮದ ಈರಪ್ಪ ನಾಗಪ್ಪ ಮತ್ತಿಹಳ್ಳಿ (ಪೂಜಾರ) (35) ಎಂದು ಗುರುತಿಸಲಾಗಿದೆ. ಘಟನೆ ಕುರಿತು ದೂರು ದಾಖಲಿಸಿಕೊಂಡಿರುವ ಬಂಕಾಪುರ ಪಿಎಸ್‌ಐ ಶಿದ್ದಾರೂಢ ಬಡಿಗೇರ ತನಿಖೆ ಕೈಗೊಂಡಿದ್ದಾರೆ.
ವಿದ್ಯುತ್ ತಗುಲಿ ಬಾಲಕ ಸಾವು
ಶಿಗ್ಗಾಂವಿ: ತಾಲೂಕಿನ ಬಾಡ ಗ್ರಾಮದಲ್ಲಿ ಗ್ರಾಪಂ ಆವರಣದಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕ ಬಸವರಾಜ ಚನ್ನಪ್ಪ ಪುಟ್ಟಪ್ಪನವರ ಎಂಬಾತನಿಗೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಘಟನೆ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

