ಹಾವೇರಿ

ಮಹಿಳೆಯರಿಗೆ ಸೂಕ್ತ ಸ್ಥಾನ ಸಿಗಲಿ

Published On :

ಹಾವೇರಿ: ಪ್ರಸ್ತುತ ಮಹಿಳೆಯರಿಗೆ ನೀಡಿರುವ ಸ್ಥಾನಮಾನದಲ್ಲಿ ಸುಧಾರಣೆ ಆಗುವವರೆಗೂ ಸಮಾಜದ ಏಳ್ಗೆ ಸಾಧ್ಯವಿಲ್ಲ ಎಂದು ಹೆಚ್ಚುವರಿ ಕಿರಿಯ ದಿವಾಣಿ ನ್ಯಾಯಾಧೀಶ ಎಸ್.ಬಿ. ಕೆಂಭಾವಿ ಕಳವಳ ವ್ಯಕ್ತಪಡಿಸಿದರು.

ನಗರದ ಹುಕ್ಕೇರಿಮಠದ ಮಹಿಳಾ ಮಹಾವಿದ್ಯಾಲಯದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾವಾದಿಗಳ ಸಂಘ ಹಾಗೂ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಪ್ರಯುಕ್ತ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ದಿನಾಚಾರಣೆ ಸಂದರ್ಭದಲ್ಲಿ ಲೇಖನ ಬರೆಯುವ ಹಾಗೂ ಭಾಷಣ ಮಾಡುವುದರಿಂದ ಸಮಾಜದಲ್ಲಿ ಏಳ್ಗೆ ಕಾಣಲು ಸಾಧ್ಯವಿಲ್ಲ. ಸಮಾಜದಲ್ಲಿ ನಡೆಯುವ ದೌರ್ಜನ್ಯ ಹಾಗೂ ಅನ್ಯಾಯದ ವಿರುದ್ಧ ಹೋರಾಡಲು ಎಲ್ಲರೂ ಸಂಘಟಿತರಾಗಬೇಕು. ಲಿಂಗ ಸಮಾನತೆ ಹಾಗೂ ಮಹಿಳಾ ದೌರ್ಜನ್ಯ ಎಂಬುದು ಕೇವಲ ಒಂದೇ ರಾಜ್ಯ, ದೇಶ, ವರ್ಗಕ್ಕೆ ಸೀಮಿತವಾದುದಲ್ಲ. ಮುಂದುವರಿದ ರಾಷ್ಟ್ರಗಳಲ್ಲಿಯೂ ತಾರತಮ್ಯ ಇದೆ. ಪುರುಷ ಪ್ರಧಾನ ಸಮಾಜದಲ್ಲಿ ಇಂದಿಗೂ ಮಹಿಳೆಯರ ಶೋಷಣೆ ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದರು.

ಪ್ರಾಚಾರ್ಯೆ ಸವಿತಾ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ವಿ.ವಿ. ಅಂಗಡಿ, ಮಾಧುರಿ ದೇವಧರ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.