ಹಾವೇರಿ

ಅಜಗುಂಡಿಕೊಪ್ಪ: ಮತದಾನ ಜಾಗೃತಿ

Published On :

ಹಾನಗಲ್ಲ: ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿಟ್ಟು ದೇಶದ ಪ್ರಜಾಸತ್ತಾತ್ಮಕ ಮತ್ತು ಮುಕ್ತ ನ್ಯಾಯಸಮ್ಮತ ಮೂಲಕ ನಮ್ಮ ಹೊಣೆಗಾರಿಕೆಯನ್ನು ಎತ್ತಿ ಹಿಡಿಯಬೇಕೆಂದು ಅಜಗುಂಡಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಭಾಸ ಹೊಸಮನಿ ಮನವಿ ಮಾಡಿದರು.
ತಾಲೂಕಿನ ಅಜಗುಂಡಿಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಚುನಾವಣೆಗಳಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಇನ್ನಾವುದೇ ಪ್ರೇರಣೆಗಳಿಗೆ ಒಳಗಾಗಿ ಮತದಾನ ಮಾಡಬಾರದು. ಪ್ರಾಮಾಣಿಕ ವ್ಯಕ್ತಿಯ ಆಯ್ಕೆಗೆ ಆದ್ಯತೆ ನೀಡಬೇಕು. ಯಾವುದೇ ಒತ್ತಡಗಳಿಗೆ ಒಳಗಾಗಿ ಮತದಾನ ಮಾಡುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಮತದಾರರು ಧೈರ್ಯವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ತಿಳಿಸಿದರು.
ಸಾರ್ವಜನಿಕರಿಗೆ ಪ್ರಾಮಾಣಿಕ ಮತದಾನಕ್ಕಾಗಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ ನಡೆಯಿತು. ಶಿಕ್ಷಕರಾದ ಮಂಜುನಾಥ ಪಾಣಿಯವರ, ವನಜಾಕ್ಷಮ್ಮ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.