ಹಾವೇರಿ

ಕಲ್ಯಾಣ ಮಂಡಳಿ ಕಾರ್ಮಿಕರಿಗೆ ವರದಾನ: ನ್ಯಾ. ಚನ್ನಕೇಶವರೆಡ್ಡಿ

Published On :

ಹಾವೇರಿ:  ಅನ್ಯರಿಗೆ ಮನೆಕಟ್ಟಿಕೊಟ್ಟು ತಾವು ಮಾತ್ರ ಸೌಲಭ್ಯಗಳಿಲ್ಲದೆ ಅಸ್ಥಿರ ಬದುಕು ಸಾಗಿಸುತ್ತಿರುವ ಕಟ್ಟಡ ಕಾರ್ಮಿಕರಿಗೆ ವರದಾನವೆಂಬಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಿದೆ. ಇದು ಕಟ್ಟಡ ಕಾರ್ಮಿಕರ ಮನೋಸ್ಥೈರ್ಯ ಹೆಚ್ಚಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ವಿ. ಚನ್ನಕೇಶವರೆಡ್ಡಿ ಹೇಳಿದರು.
ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದಿಂದ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಕಟ್ಟಡ ಕಾರ್ಮಿಕರ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಟ್ಟಡ ಕಾರ್ಮಿಕರು ಆರ್ಥಿಕ ಆಸರೆ ಇಲ್ಲದೆ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಪ್ರತಿಯೊಬ್ಬ ಕಟ್ಟಡ ಕಾರ್ಮಿಕರ ಜೀವನದಲ್ಲಿ ಸಂಭವಿಸಬಹುದಾದ ಪ್ರತಿಯೊಂದು ಅಪಘಾತಕ್ಕೆ ಸೂಕ್ತ ಪರಿಹಾರ ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾಡುತ್ತಿದೆ. ಇದರ ಸದುಪಯೋಗವನ್ನು ಕಟ್ಟಡ ಕಾರ್ಮಿಕರು ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಎಸ್. ಹೊರಟ್ಟಿ,  ವಕೀಲ ಪರಶುರಾಮ ಅಗಡಿ ಮಾತನಾಡಿದರು. ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ರಾಜನಹಳ್ಳಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.