ಹಾವೇರಿ

ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ

Published On :

ರಾಣಿಬೆನ್ನೂರು: ಯಾವುದೇ ಆಸೆ, ಆಮಿಷಕ್ಕೆ ಬಲಿಯಾಗದೆ, ಪ್ರಜಾಪ್ರಭುತ್ವದ ತತ್ವ, ಸಿದ್ಧಾಂತಗಳಿಗೆ ಚ್ಯುತಿ ಬಾರದಂತೆ ಮತದಾರರು ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ. ಕೃಷ್ಣಮೂರ್ತಿ ಹೇಳಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರಸಭೆ ಹಾಗೂ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ರಾಣಿಬೆನ್ನೂರು ಆಶ್ರಯದಲ್ಲಿ ಮತದಾರರ ಜಾಗೃತಿಗಾಗಿ ದೈಹಿಕ ಶಿಕ್ಷಣ ಶಿಕ್ಷಕ, ಶಿಕ್ಷಕಿಯರು ನಡೆಸಿದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನ ಮಾಡುವುದು ಪ್ರತಿಯೊಬ್ಬ ಮತದಾರರ ಹಕ್ಕಾಗಿದ್ದು, ಮತ ಚಲಾವಣೆಯ ಹಕ್ಕನ್ನು ಪಡೆದಿರುವ ಮತದಾರರು ಅಭ್ಯರ್ಥಿಗಳು ನೀಡುವ ಆಸೆ, ಆಮಿಷಗಳಿಗೆ ಬಲಿಯಾಗದೆ ತಮ್ಮ ಪವಿತ್ರವಾದ ಮತವನ್ನು      ಯೋಗ್ಯ ಅಭ್ಯರ್ಥಿಗೆ ನೀಡುವುದರೊಂದಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠಗೊಳಿಸಬೇಕೆಂದು ಕರೆ  ನೀಡಿದರು.
ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಲಕ್ಷ್ಮಣ, ದೈಹಿಕ ಶಿಕ್ಷಣಾಧಿಕಾರಿ ಎ.ಬಿ. ಚಂದ್ರಶೇಖರ, ನಗರಸಭೆ ಪೌರಾಯುಕ್ತ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹಾಗೂ ತಾಲೂಕಾ ಲೋಕ ಶಿಕ್ಷಣ ಸಮಿತಿಯ ಸಂಯೋಜಕ ಆರ್.ಡಿ. ಹೊಂಬರಡಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಮುಖಂಡ ಕೇಶವ ಆರ್. ಬಾರ್ಕಿ ಮತದಾರರ ಜಾಗೃತಿ ಜಾಥಾದ ಕುರಿತು ಮಾತನಾಡಿದರು.
ಸಿಆರ್‌ಸಿ ಗಳಾದ ಎಂ.ಕೆ. ಸಾಲಿಮಠ, ಎಸ್.ಎಚ್. ಮೇಟಿ, ಉಮ್ಮನಗೌಡ್ರ, ಆರ್.ಎಂ. ಗುಂಜಾಳ, ಎಂ.ಎಂ. ಇಟಗೇರ, ಎಚ್.ಎಸ್. ತಡಕನಹಳ್ಳಿ, ಶಿಕ್ಷಣ ಸಂಯೋಜಕ ಎಸ್.ಐ. ತಡಕನಹಳ್ಳಿ, ಎಲ್.ಕೆ. ಗೆಜ್ಜೆಹಳ್ಳಿ ಹಾಗೂ ನಗರದ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕ-ಶಿಕ್ಷಕಿಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.