ನಿರ್ಭೀತಿಯಿಂದ ಮತ ಚಲಾಯಿಸಿ: ಭಜಂತ್ರಿ
ಶಿಗ್ಗಾಂವಿ: ಮತದಾನ ನಮ್ಮ ಕರ್ತವ್ಯ. ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪಿ.ಎ. ಭಜಂತ್ರಿ ಹೇಳಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಲು ಶಿಸ್ತುಬದ್ಧ ತರಬೇತಿ ನೀಡುವ ಹಾಗೂ ಮತದಾನದಲ್ಲಿ ಪಾಲ್ಗೊಳ್ಳುವಿಕೆಯ ಕುರಿತು ಜರುಗಿದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ರಾಜಕೀಯ ಪಕ್ಷಗಳ ಆಮಿಷಕ್ಕೆ ಒಳಗಾಗದೆ, ನಿರ್ಭೀತಿಯಿಂದ ಮತದಾನ ಮಾಡುವ ಮನೋಬಲವನ್ನು ಮತದಾರರು ಬೆಳೆಸಿಕೊಳ್ಳಬೇಕು. ಮತದಾನ ನಮ್ಮ ಧ್ವನಿ, ನಮ್ಮ ಮತ, ನಮ್ಮ ಕರ್ತವ್ಯ ಎಂಬುದನ್ನು ಅರಿತುಕೊಂಡು ಹಕ್ಕನ್ನು ಚಲಾಯಿಸಿದಾಗ ಶಾಂತಿಯುತ ಚುನಾವಣೆ ಜರುಗಿ ನಮ್ಮ ಆಸೆಗೆ ತಕ್ಕ ಫಲಿತಾಂಶವನ್ನು ಪಡೆಯಲು ಸಾಧ್ಯ. ಯಾವುದೇ ಅಹಿತಕರ ಘಟನೆಗಳಿಗೆ ಕಿವಿಗೊಡದೆ, ನ್ಯಾಯಸಮ್ಮತವಾದ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರ ಪಾಲ್ಗೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ತಾಪಂ ಇಒ ಎಸ್.ಎಂ. ಕುಂದೂರು ಮಾತನಾಡಿ, ಯುವ ಸಮುದಾಯ ಮತದಾನ ಮಾಡುವತ್ತ ಜಾಗೃತರಾಗಬೇಕು. ಮತದಾನದ ಹಕ್ಕನ್ನು ಅರಿತು ತಾವೂ ಅದರ ಉಪಯೋಗ ಮಾಡುವುದರ ಜತೆಗೆ ಮತದಾನದಿಂದ ದೂರ ಉಳಿಯುವ ಹಿರಿಯರಿಗೆ ಈ ಕುರಿತು ಅರಿವು ಮೂಡಿಸುವ ಮೂಲಕ ಅವರನ್ನು ಮತಗಟ್ಟೆಗೆ ಬರುವಂತೆ ಪ್ರೇರೇಪಿಸುವಂತಹ ಮಹತ್ತರ ಜವಾಬ್ದಾರಿ ಇಂದಿನ ಯುವ ಸಮುದಾಯದ ಮೇಲಿದೆ. ಪ್ರತಿಶತ ನೂರರಷ್ಟು ಮತದಾನವಾದಾಗ ಮಾತ್ರ ಪ್ರಾಮಾಣಿಕ ಫಲಿತಾಂಶವನ್ನು ಪಡೆಯಲು ಸಾಧ್ಯ ಎಂದರು. ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಶಿಶು ಅಭಿವೃದ್ಧಿ ಅಧಿಕಾರಿ ಜಿ. ಪದ್ಮಾವತಿ, ಪುರಸಭೆ ಮುಖ್ಯಾಧಿಕಾರಿ ಪಿ.ಎಂ. ಚಿನ್ನಪ್ಪನವರ, ಸಹಾಯಕ ಲೆಕ್ಕಾಧಿಕಾರಿ ಹೊನ್ನ ಕಸ್ತೂರಿ, ಜಿಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ವಿ. ದೇವನಾಳ, ಸಮಾಜ ಕಲ್ಯಾಣ ಇಲಾಖೆಯ ಚಿದಂಬರ ಚೊಂಚಳ್ಳಿ, ರಾಘವೇಂದ್ರ ವರ್ಣೇಕರ, ಕೆ.ಆರ್. ರಿತ್ತಿ ಉಪಸ್ಥಿತರಿದ್ದರು. ದೀಪಾ ಮಾದರ ಪ್ರಾರ್ಥಿಸಿದರು. ಈರಣ್ಣ ಚಿಟ್ಟಿ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

