ಮತದಾನ ಸಂವಿಧಾನ ನೀಡಿದ ಮಹತ್ವದ ಹಕ್ಕು: ಜನವಾಡ
ಹಿರೇಕೆರೂರು: ಮತದಾನ ಸಂವಿಧಾನ ನೀಡಿರುವ ಮಹತ್ವದ ಹಕ್ಕು. ಈ ಹಕ್ಕನ್ನು ಪ್ರತಿಯೊಬ್ಬರೂ ತಪ್ಪದೇ ಚಲಾಯಿಸುವ ಮೂಲಕ ದೇಶದ ಭವಿಷ್ಯದ ರಕ್ಷಣೆಗೆ ಮುಂದಾಗಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಚುನಾವಣಾ ಸ್ವೀಪ್ ಸಮಿತಿ ಅಧ್ಯಕ್ಷ ಡಿ.ಎಂ. ಜನವಾಡ ಹೇಳಿದರು.
ಅವರು ಪಟ್ಟಣದ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಗಾರದಲ್ಲಿ ಮಾತನಾಡಿದರು. ಮತದಾನ ಮಹತ್ವ ಅರಿತು ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತಗಟ್ಟೆಗೆ ತೆರಳಿ ಮತ ಚಲಾಯಿಸಬೇಕು. ಈ ಕುರಿತು ಸಾಕ್ಷರರು ಜನತೆಗೆ ಅರಿವು ಮೂಡಿಸಬೇಕು ಎಂದರು. ಕ್ಷೇತ್ರಶಿಕ್ಷಣಾಧಿಕಾರಿ ಎಂ.ಸಿ. ಆನಂದ ಮಾತನಾಡಿ, ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವವನ್ನು ಹೊಂದಿರುವ ಬಹುದೊಡ್ಡ ಹಾಗೂ ಬಲಿಷ್ಠರಾಷ್ಟ್ರ ಭಾರತವಾಗಿದೆ. ಇಲ್ಲಿ ಪ್ರತಿಯೊಬ್ಬ ಪ್ರಜೆಯ ಮತವೇ ದೇಶದ ಭವಿಷ್ಯದ ಬುನಾದಿ ಆಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವನ್ನು ಮಾಡುವುದು ನಮ್ಮ ಕರ್ತವ್ಯ ಎಂಬುದನ್ನು ಎಲ್ಲರೂ ತಿಳಿದುಕೊಂಡು ಚುನಾವಣೆಯಲ್ಲಿ ಮತಚಲಾಯಿಯಬೇಕು ಎಂದರು. ಸ್ವೀಪ್ ಸಮಿತಿ ಸದಸ್ಯರಾದ ಸಿಡಿಪಿಒ ಶ್ರಿನಿವಾಸ ಅಲದರ್ತಿ, ಪಪಂ ಮುಖ್ಯಾಧಿಕಾರಿ ಎಂ.ಎಚ್. ರಾಜಕುಮಾರ, ಕೆ.ವಿ. ಹಂಚಿನಮನಿ ಇದ್ದರು. ವಸತಿ ನಿಲಯದಲ್ಲಿದ್ದ ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಮಾಜ ಕಲ್ಯಾಣಾಧಿಕಾರಿ ಡಿ. ಮಂಜಪ್ಪ ಪ್ರಸ್ತಾವಿಕ ಮಾತನಾಡಿದರು. ಬಿಸಿಎಂ ಅಧಿಕಾರಿ ಜಿ.ಬಿ. ಮುತ್ತಗಿ ಸ್ವಾಗತಿಸಿದರು. ಎನ್.ಎಂ. ಬೋಸ್ಲೆ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

