ಮೊರಾರ್ಜಿ, ಚನ್ನಮ್ಮ ವಸತಿ ಶಾಲೆ ಪ್ರವೇಶ ಪರೀಕ್ಷೆ
ಬ್ಯಾಡಗಿ: ಮೊರಾರ್ಜಿ ಹಾಗೂ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯು ಪಟ್ಟಣದ ಮೂರು ಕೇಂದ್ರಗಳಲ್ಲಿ ಭಾನುವಾರ ಶಾಂತಿಯುತವಾಗಿ ನಡೆಯಿತು.
ಮೂರು ಕೇಂದ್ರಗಳಿಂದ ಒಟ್ಟು 604 ವಿದ್ಯಾರ್ಥಿಗಳಿದ್ದು, 16 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಎಸ್.ಎಸ್. ಪಿ.ಎನ್. ಕೇಂದ್ರದ 250 ವಿದ್ಯಾರ್ಥಿಗಳಲ್ಲಿ 14 ಗೈರು, ಎಸ್.ಜೆ.ಜೆ.ಎಂ ಕೇಂದ್ರದಲ್ಲಿ 250ರಲ್ಲಿ (2 ಗೈರು) ಅಂಬೇಡ್ಕರ್ ಪ್ರೌಢ ಶಾಲೆ ಕೇಂದ್ರದಲ್ಲಿ 104 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಮೊರಾರ್ಜಿ ಹಾಗೂ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಗಳ ಪ್ರವೇಶ ಪಡೆಯಲಿದ್ದಾರೆ. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಎಂ. ಅಣ್ಣಪ್ಪ, ಹಿಂದುಳಿದ ವರ್ಗಗಳ ಇಲಾಖೆ ವಿಸ್ತೀರ್ಣಾಧಿಕಾರಿ ಗೀತಾ ಕುಂದಾಪುರ ಹಾಗೂ ಶಿಡೇನೂರ ಮೊರಾರ್ಜಿ ವಸತಿ ಶಾಲೆ ಪ್ರಾಚಾರ್ಯ ಎಸ್.ಎನ್. ಯಮನಕ್ಕನವರ ನೇತೃತ್ವದಲ್ಲಿ ಒಟ್ಟು 31 ಸಿಬ್ಬಂದಿ ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ನೋಡಿಕೊಂಡರು.
ಅಧಿಕಾರಿಗಳ ಭೇಟಿ: ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇದರ ಉಪನಿರ್ದೇಶಕ ಚಂದ್ರಾನಾಯ್ಕ, ಹಾವೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಾಳಿಗೇರ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾವೇರಿ: ಎಬಿವಿಪಿಯಿಂದ ಉಚಿತ ಸಿಇಟಿ ತರಬೇತಿ
ಹಾವೇರಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಧಾರವಾಡ ಮತ್ತು ಹುಬ್ಬಳ್ಳಿ ನಗರ ಶಾಖೆಗಳಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಸಿಇಟಿ ತರಬೇತಿ ತರಗತಿಗಳನ್ನು ಏ. 1ರಿಂದ 15ರವರೆಗೆ ಏರ್ಪಡಿಸಲಾಗಿದೆ.
ನುರಿತ ಹಾಗೂ ಅನುಭವಿ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ಮುದ್ರಿತ ನೋಟ್ಸ್ಗಳನ್ನು ನೀಡಲಾಗುವುದು. ಪಿಸಿಎಂಬಿ ವಿಷಯಗಳಲ್ಲಿ ತರಬೇತಿ ನಡೆಸಲಾಗುವುದು. ಗ್ರಾಮಾಂತರ ವಿದ್ಯಾರ್ಥಿಗಳಿಗೆ ಹಾಗೂ ಬೇರೆ ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಕೊನೆಯಲ್ಲಿ ಸಿಇಟಿ ಮಾದರಿ ಪರೀಕ್ಷೆಯನ್ನು ನಡೆಸಲಾಗುವುದು. ಆದ್ದರಿಂದ ಮೊದಲ ಬಂದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆದ್ದರಿಂದ ಜಿಲ್ಲೆಯ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9449791863, 9060656555, 9449791863, 8123373737 ಸಂಪರ್ಕಿಸುವಂತೆ ಎಬಿವಿಪಿ ನಗರ ಕಾರ್ಯದರ್ಶಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

