ಕ್ರಷರ್ಗಳ ಮೇಲೆ ದಾಳಿ, ಪರಿಶೀಲನೆ
ಬ್ಯಾಡಗಿ: ಸುಮಾರು 50ಕ್ಕೂ ಹೆಚ್ಚು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡವು ತಹಸೀಲ್ದಾರ್ ನೇತ್ವದಲ್ಲಿ ಮೋಟೆಬೆನ್ನೂರು, ಛತ್ರ ಹಾಗೂ ಬುಡಪನಹಳ್ಳಿ ಗ್ರಾಮಗಳ ಸುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಕ್ರಷರ್ಗಳ ಮೇಲೆ ದಾಳಿ ನಡೆಸಿ ಕೆಲ ದಾಖಲೆಗಳ ಪರಿಶೀಲನೆ ನಡೆಸಿತು.
ಒಂದೇ ಪರವಾನಗಿಯಲ್ಲಿ ಮೂರ್ನಾಲ್ಕು ಕ್ರಷರ್ಗಳನ್ನು ಹೊಂದಿರುವ ಬಗ್ಗೆ ಗಣಿಗಾರಿಕೆ ಲೈಸನ್ಸ್ ಹೊಂದಿದ್ದು, ನವೀಕರಿಸದಿರುವ ಕುರಿತು, ಕೈಗಾರಿಕೆ ಉದ್ದೇಶಕ್ಕಾಗಿ ಪರಿವರ್ತನೆಯಾಗದಿರುವ ಕೃಷಿಭೂಮಿಯಲ್ಲಿ, ಸಂಬಂಧಿಸಿದ ಇಲಾಖೆಗಳ ಅಧಿಕೃತ ಪರವಾನಗಿ ಪಡೆಯದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ತಂಡ ದಾಖಲೆಗಳ ಪರಿಶೀಲನೆ ನಡೆಸಿತು.
ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟುವುದೂ ಸೇರಿದಂತೆ ಇತ್ತೀಚೆಗೆ ತಿದ್ದುಪಡಿಯಾದ ಕೆಲ ಕಾನೂನುಗಳನ್ನು ಪಾಲಿಸದಿರುವ ಕೆಲ ಕ್ರಷರ್ಗಳಿಗೆ ನೋಟಿಸ್ ಜಾರಿ ಮಾಡಿರುವುದಾಗಿ ಮಾಹಿತಿ ಲಭ್ಯವಾಗಿದೆ. ಬುಡಪನಹಳ್ಳಿ ಗ್ರಾಮದ ಸ್ಟೋನ್ ಕ್ರಷರ್ವೊಂದು ವನ್ಯಜೀವಿ ಸಂರಕ್ಷಣಾ ಇಲಾಖೆಗೆ ಸೇರಿದ ಅರಣ್ಯ ಪ್ರದೇಶ ಒತ್ತುವರಿ ಮಾಡಿದ ಬಗ್ಗೆ ಸಂಶಯ ವ್ಯಕ್ತಪಡಿಸಿದ ಅಧಿಕಾರಿಗಳು ಮೋಜಣಿ ಕಾರ್ಯ ಕೈಕೊಳ್ಳಲು ನಿರ್ಧರಿಸಿತು.
ರೈತರ ತಕರಾರು: ಸ್ಟೋನ್ ಕ್ರಷರ್ಗಳಿಂದ ಆಗುತ್ತಿರುವ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ತನಿಖೆ ಕೈಗೊಳ್ಳುವಂತೆ ಅಧಿಕಾರಿಗಳು ಒತ್ತಾಯಿಸಿದ ಘಟನೆಯೂ ಇದೇ ಸಂದರ್ಭ ನಡೆಯಿತು. ಈ ಕುರಿತು ಕರಿಯಪ್ಪ ಕುರಿಯವರ ಮಾತನಾಡಿ, ಕ್ರಷರ್ಗಳಿಂದಾಗುತ್ತಿರುವ ಹಾನಿ ಕುರಿತು ಮೂರ್ನಾಲ್ಕು ಬಾರಿ ಮನವಿ ಸಲ್ಲಿಸುವ ಮೂಲಕ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಮಾತ್ರ ಕ್ರಷರ್ ಮಾಲೀಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಕೂಡಲೇ ಅವುಗಳಿಂದ ಹೊರಸೂಸುವ ಧೂಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಶಿವಶಂಕರ್ ನಾಯಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಸಾದ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

