ಹಾವೇರಿ

ಗೆಲುವು ನನ್ನದೇ...

Published On :

ಬ್ಯಾಡಗಿ:  ರಾಜ್ಯದಲ್ಲಿ ಮೋದಿ ಅಲೆಯಿಲ್ಲ. ಬದಲಾಗಿ ಕಾಂಗ್ರೆಸ್ ಬಿರುಗಾಳಿಯಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಯೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು, ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತವೆಂದು ಹಾವೇರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ಪಟ್ಟಣದಲ್ಲಿ ರೋಡ್‌ಶೋ ನಡೆಸುವ ಮೂಲಕ ಮತಯಾಚನೆ ನಡೆಸಿದ ಅವರು ಚುನಾವಣಾ ಪ್ರಚಾರದ ಕುರಿತು ಮಾತನಾಡಿದರು. ಕಾಂಗ್ರೆಸ್‌ಗೆ ಪರ್ಯಾಯ ಶಕ್ತಿ ಇನ್ನೊಂದಿಲ್ಲ. ನೂರು ಜನ ನರೇಂದ್ರ ಮೋದಿ ಬಂದರೂ ಕಾಂಗ್ರೆಸ್‌ನ್ನು ಸೋಲಿಸಲು ಸಾಧ್ಯವಿಲ್ಲ ಎಂದರು. ಈ ಬಾರಿ ತಾವು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.  ಚುನಾವಣಾ ಪೂರ್ವ ಸಮೀಕ್ಷೆಗಳು ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದಾಗಿ ಸುದ್ದಿ ಮಾಡುತ್ತಿವೆ. ಜನತೆ ತೆಗೆದುಕೊಳ್ಳುವ ತೀರ್ಮಾನವನ್ನು ಮೊದಲೇ ಫಲಿತಾಂಶಗಳ ಮೂಲಕ ಪ್ರಕಟಿಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಲ್ಲ ಎಂದರು. ಸಂಗಮೇಶ್ವರ ನಗರದಿಂದ ಶಾಸಕ ಬಸವರಾಜ ಶಿವಣ್ಣನವರ ನಿವಾಸದಿಂದ ಆರಂಭವಾದ ರೋಡ್‌ಶೋ ಪುರಸಭೆ, ಬೀರೇಶ್ವರ ದೇವಸ್ಥಾನ, ಮುಖ್ಯರಸ್ತೆ, ಚಾವಡಿ ರೋಡ, ಕುಂಬಾರಓಣಿ, ಕದರಮಂಡಲಗಿ ರಸ್ತೆ ನೆಹರು ನಗರದಲ್ಲಿನ ದಾನಮ್ಮದೇವಿ ದೇವಸ್ಥಾನದಲ್ಲಿ ಕೊನೆಗೊಂಡಿತು. ಶಾಸಕ ಬಸವರಾಜ ಶಿವಣ್ಣನವರ, ತಾಲೂಕಾಧ್ಯಕ್ಷ ಎಚ್.ಎಚ್. ದೊಡಮನಿ, ಕಾಗಿನೆಲೆ ಬ್ಲಾಕ್ ಅಧ್ಯಕ್ಷ ಸುರೇಶಗೌಡ ಪಾಟೀಲ, ಮುಖಂಡರಾದ ಎಸ್.ಸಿ. ಶಿಡೇನೂರ, ಬಸವರಾಜ ಸವಣೂರ, ದಾನಪ್ಪ ಚೂರಿ, ಲಿಂಗಪ್ಪ ಕೊಂಬಳಿ, ರಮೇಶ ಸುತ್ತಕೋಟಿ, ಹುಚ್ಚನಗೌಡ ಲಿಂಗನಗೌಡ್ರ, ರಾಜಣ್ಣ ಕಳ್ಯಾಳ, ಬೀರಪ್ಪ ಬಣಕಾರ, ರುದ್ರಪ್ಪ ಹೊಂಕಣ, ನಜೀರ್ ಶೇಖ್, ದುರ್ಗೇಶ ಗೋಣೆಮ್ಮನವರ, ಮಂಜುನಾಥ ಭೋವಿ ಚುನಾಯಿತ ಪ್ರತಿನಿಧಿಗಳು ಪಕ್ಷದ ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.