ಹಾವೇರಿ

ವಿವಾಹದಲ್ಲಿ ವಿವಾದ ಬೇಡ: ಸದಾಶಿವ ಶ್ರೀ

Published On :

ಹಾವೇರಿ: ವಿವಾಹವು ಪ್ರತಿಯೊಬ್ಬನ ಜೀವನದಲ್ಲಿ ಒಂದು ಪ್ರಮುಖ ಘಟ್ಟ. ವಿವಾಹವು ವಿವಾದಕ್ಕೆ ಆಸ್ಪದ ಕೊಡಬಾರದು. ದಂಪತಿಗಳು ಪರಸ್ಪರ ಪ್ರೀತಿ ವಿಶ್ವಾಸದಿಂದ ಒಬ್ಬರನ್ನೊಬ್ಬರು ಅರ್ಥಮಾಡಿಕೊಂಡು ಜೀವನ ನಡೆಸಿದರೆ ಬಾಳು ಹಸನಾಗುತ್ತದೆ ಎಂದು ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಹೇಳಿದರು.
ಅವರು ನಗರದ ಹುಕ್ಕೇರಿ ಮಠದಲ್ಲಿ ಬಸವ ಜಯಂತಿ ನಿಮಿತ್ತ ಶುಕ್ರವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮದುವೆ ಎಂಬುದು ಖರ್ಚಿನ ವಿಷಯವಾಗಿದ್ದು, ಶ್ರೀಮಠದಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ ಭಕ್ತರು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಬೇಕು. ವಧು-ವರರರು ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಜೀವನ ನಡೆಸಬೇಕು. ಧರ್ಮ, ಅರ್ಥ, ಕಾಮ ಇವುಗಳನ್ನು ಸಮರ್ಥವಾಗಿ ತಮ್ಮ ಬದುಕಿನಲ್ಲಿ ಆಚರಿಸಬೇಕೆಂದು ಕರೆ ನೀಡಿದರು.
ಶಿವಬಸಪ್ಪ ಹುರಳಿಕುಪ್ಪಿ, ಶಿವಣ್ಣ ಶಿರೂರ, ಎಸ್.ಎಂ. ಹಾಲಯ್ಯನವರಮಠ, ಶಿವಯೋಗೆಪ್ಪ ಅರಣಿ, ರಾಚೋಟೆಪ್ಪ ಲಂಬಿ, ಮಲ್ಲಿಕಾರ್ಜುನ ಸಾತೇನಹಳ್ಳಿ, ಕರಬಸಪ್ಪ. ಹಲಗಣ್ಣನವರ  ಭಾಗವಹಿಸಿದ್ದರು. ಬಸವ ಜಯಂತಿ ಉತ್ಸವದ ಅಧ್ಯಕ್ಷ ಶಿವಬಸಪ್ಪ ಮುದ್ದಿ ಪ್ರಾಸ್ತಾವಿಕ ಮಾತನಾಡಿದರು. ಬಿ. ಬಸವರಾಜ ಸ್ವಾಗತಿಸಿ, ನಿರ್ವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.