ಹಾವೇರಿ

ಮಹಿಳಾ ಕಾರ್ಮಿಕರಿಗೆ ಬಟ್ಟೆ ವಿತರಣೆ

Published On :

ಹಾನಗಲ್ಲ: ತಾಲೂಕಿನ ಅಕ್ಕಿಆಲೂರಿನಲ್ಲಿ ಅಡಕೆ ಸುಲಿಯುವ ಮಹಿಳಾ ಕಾರ್ಮಿಕರಿಗೆ ಬಟ್ಟೆ ವಿತರಿಸುವ ಮೂಲಕ ಕಾಂಗ್ರೆಸ್ ಆಶ್ರಯದಲ್ಲಿ ಕಾರ್ಮಿಕರ ದಿನ ಆಚರಿಸಲಾಯಿತು. ಅಕ್ಕಿಆಲೂರಿನ ಕಲ್ಲಾಪುರ ಕ್ರಾಸ್ ಬಳಿ ನಡೆದ ಕಾರ್ಮಿಕರ ದಿನಾಚರಣೆಯ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಕಾರ್ಮಿಕರು ಸಮಾಜದ ಅವಿಭಾಜ್ಯ ಅಂಗ. ಅವರು ಶೋಷಣೆಗೆ ಒಳಗಾಗದಂತೆ ಉತ್ತಮ ವಾತಾವರಣ ಕಲ್ಪಿಸಿಕೊಡುವಲ್ಲಿ ಪ್ರತಿಯೊಬ್ಬರೂ ಗಮನ ನೀಡಬೇಕಿದೆ ಎಂದರು. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯರ್ಶಿ ಫಕ್ಕೀರಗೌಡ ಪಾಟೀಲ, ಮುಖಂಡರಾದ ಟಾಕನಗೌಡ ಪಾಟೀಲ, ಬಸವರಾಜ ಹಾಲಬಾವಿ, ನಗರ ಕಾಂಗ್ರೆಸ್ ಅಧ್ಯಕ್ಷ ಇಂದೂಧರ ಸಾಲಿಮಠ, ಗಿರೀಶಗೌಡ ಪಾಟೀಲ, ಶಹಜಾದ್ ಬಂಕಾಪುರ, ಯಲ್ಲಪ್ಪ ಕೂಸನೂರ ಇತರರಿದ್ದರು.


ಹಾನಗಲ್: ಸಂಭ್ರಮದ ದುಂಡಿಬಸವೇಶ್ವರ ಜಾತ್ರೆ


ಹಾನಗಲ್ಲ: ಬಸವ ಜಯಂತಿ ಪ್ರಯುಕ್ತ ತಾಲೂಕಿನ ಅಕ್ಕಿಆಲೂರು ಗ್ರಾಮದ ದುಂಡಿಬಸವೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚನ್ನವೀರೇಶ್ವರ ವಿರಕ್ತಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಬೆಳಗ್ಗೆ ದುಂಡಿಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ಸೇರಿದಂತೆ ಹಲವು ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಅರ್ಚಕ ಬಸಯ್ಯಶಾಸ್ತ್ರಿ ವಾಚದಮಠ ನೇತೃತ್ವದಲ್ಲಿ ನೆರವೇರಿದವು. ಬಳಿಕ ಪುಷ್ಪ ರಥೋತ್ಸವ, ಗುಗ್ಗಳ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನದ ಆವರಣದಿಂದ ಆರಂಭಗೊಂಡ ಗುಗ್ಗಳ, ರಥೋತ್ಸವ ದುಂಡಿಬಸವೇಶ್ವರ ಓಣಿ, ಅಡಿಕೆಪೇಟೆ, ಪೇಟೆ ಓಣಿ ಮೂಲಕ ವೀರಭದ್ರೇಶ್ವರ ದೇವಸ್ಥಾನ ತಲುಪಿ ದುಂಡಿಬಸವೇಶ್ವರ ದೇವಸ್ಥಾನಕ್ಕೆ ಮರಳಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.