ಹಾವೇರಿ

ಮಹಿಳೆಯರಿಗೆ ಕಾನೂನು ಅರಿವು ಅಗತ್ಯ: ಪಲ್ಲೇದ

Published On :

ಹಿರೇಕೆರೂರು: ಲೈಂಗಿಕ ಕಿರುಕುಳದ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯ ಪಡೆಯುವುದರ ಜತೆಗೆ ಮಹಿಳೆಯರು ಕಾನೂನಿನ ಜ್ಞಾನ ಹಾಗೂ ತಿಳಿವಳಿಕೆ ಪಡೆಯುವ ಮೂಲಕ ಸಮಾಜದಲ್ಲಿರುವ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳನ್ನು ತಡೆಗಟ್ಟಲು ಸಾಧ್ಯ ಎಂದು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ದಿವಾಣಿ ನ್ಯಾಯಾಧೀಶ ರವೀಂದ್ರ ಜೆ. ಪಲ್ಲೇದ ಹೇಳಿದರು.
ಮಂಗಳವಾರ ಪಟ್ಟಣದ ಶ್ರೀಶಕ್ತಿ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾಧಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಲೈಂಗಿಕ ಕಿರುಕುಳದಿಂದ ಮಕ್ಕಳು ಮತ್ತು ಉದ್ಯೋಗಸ್ಥ ಮಹಿಳೆಯರ ರಕ್ಷಣೆ ಕುರಿತು ಏರ್ಪಡಿಸಿದ್ದ ಕಾನೂನು ಸಾಕ್ಷರಾತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಹಾಯಕ ಸರ್ಕಾರಿ ಅಭಿಯೋಜಕ ಮಹೇಶ ವಿ. ವೈದ್ಯ ಮಾತನಾಡಿದರು. ಸಿಡಿಪಿಒ ಶ್ರೀನಿವಾಸ ಆಲದಾರ್ತಿ ಅಧ್ಯಕ್ಷತೆ ವಹಿಸಿದ್ದರು.
ದಿವಾಣಿ ನ್ಯಾಯಾಧೀಶೆ ಶಿರಿನ್ ಜೆ. ಅನ್ಸಾರಿ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಯೋಗೇಶ, ಎಸಿಡಿಪಿಒ ಗೀತಾ ಬಾಳಿಕಾಯಿ, ತಾಲೂಕು ನ್ಯಾಯವಾಧಿಗಳ ಸಂಘದ ಅಧ್ಯಕ್ಷ ಎಂ.ಆರ್. ಮಣಕೂರು, ಕಾರ್ಯದರ್ಶಿ ಸಂಜೀವಯ್ಯ ಕಬ್ಬಿಣಕಂತಿಮಠ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಶ್ರೀಶಕ್ತಿ ಸಂಘದ ಸದಸ್ಯರು, ಮಹಿಳೆಯರು ಇದ್ದರು. ಮಹಿಳಾ ಮೇಲ್ವಿಚಾರಕಿ ಬಿ.ಎಸ್. ಶೈಲಾ, ಕೆ.ಎಚ್. ಕವಿತಾ ಹಾಗೂ ಶಾಂತಾ ಹುಳ್ಳೇರ ನಿರ್ವಹಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.