ಸೌಕರ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ವಿಫಲ: ಯಾದವ್
ಗುತ್ತಲ: ರಾಜ್ಯಾದಂತ ಸಾರ್ವಜನಿಕರು ಒಂದಿಲ್ಲೊಂದು ಸಮಸ್ಯೆಯಿಂದ ಬಳಲುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್ ನಿರ್ವಹಣೆ ಅಸಮರ್ಥತೆಯಿಂದ ಸಾರ್ವಜನಿಕರು ಆತಂಕಕೊಳಗಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಸಿದ್ದಬಸಪ್ಪ ಯಾದವ್ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬರ ಪರಿಹಾರ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದಿರುವ ಬಗ್ಗೆ ಈಗಾಗಲೇ ರಾಜ್ಯಪಾಲರೇ ಟೀಕಿಸಿದ್ದಾರೆ. ಇಂಥ ಸಂದರ್ಭ ಬಸ್ ದರ ಹೆಚ್ಚಿಸುವ ಮೂಲಕ ಸಾಮಾನ್ಯ ಜನರ ಸಂಚಾರಕ್ಕೂ ಸರ್ಕಾರ ಸಂಚಕಾರ ತಂದಿದೆ ಎಂದು ಸಿದ್ದಬಸಪ್ಪ ತಿಳಿಸಿದ್ದಾರೆ.
ಒಂದೆಡೆ ಕೊಡುವ ಹಾಗೆ ಕೊಟ್ಟು ಮತ್ತೊಂದಡೆ ಕಿತ್ತುಕೊಳ್ಳುವ ನಾಟಕ ಆಡುತ್ತಿರುವ ಕಾಂಗ್ರೆಸ್, ಸರ್ಕಾರ ನಡೆಸಲು ವಿಫಲವಾಗಿದೆ. ರು. 1ಗೆ ಕೆಜಿ ಅಕ್ಕಿಯಂತೆ ಆಕರ್ಷಕ ಯೋಜನೆ ಮೂಲಕ ರಾಜ್ಯದ ಜನರನ್ನು ಮರಳು ಮಾಡುತ್ತಾ ಅವರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಇವರು ಬಡವರಿಗಾಗಿ ಕೊಡುವ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈಗ ನಡೆದಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಕೋಮುವಾದಿ ಬಿಜೆಪಿಯನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಅಪಾದಿಸಿದ ಅವರು, ಈ ಎರಡು ಪಕ್ಷಗಳ ವೈಫಲ್ಯದ ಲಾಭ ಜೆಡಿಎಸ್ಗೆ ಸಿಗಲಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಭಾರತದಲ್ಲಿ ಜೆಡಿಎಸ್ ಪ್ರಬಲ ಪಕ್ಷವಾಗಿ ಹೊರಹೊಮ್ಮಲಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

