ಜನರನ್ನು ಸೋಮಾರಿಗಳನ್ನಾಗಿ ಮಾಡಿದ್ದು ಕಾಂಗ್ರೆಸ್ ಸೋಲಿಗೆ ಕಾರಣ: ರೈತ ಸಂಘ
ಹಾನಗಲ್ಲ: ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಷದಲ್ಲಿ ರಾಜ್ಯದ ರೈತರ ಒಕ್ಕಲುತನ ನಾಶ ಮಾಡಿ, ದುಡಿದು ತಿನ್ನುವ ಬಡ ವರ್ಗವನ್ನು ಸೋಮಾರಿಗಳನ್ನಾಗಿ ಮಾಡಿದ್ದರ ಪರಿಣಾಮ ಸೋಲನುಭವಿಸಿದೆ ಎಂದು ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆರೋಪಿಸಿದ್ದಾರೆ.
ಹಾನಗಲ್ಲಿನಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ರೈತ ಸಂಘದ ಅಧ್ಯಕ್ಷ ಮಾಲಿಂಗಪ್ಪ ಅಕ್ಕಿವಳ್ಳಿ, ಕಾರ್ಯದರ್ಶಿ ಅಡಿವೆಪ್ಪ ಆಲದಕಟ್ಟಿ, ರೈತ ಮುಖಂಡ ಮಲ್ಲೇಶಪ್ಪ ಪರಪ್ಪನವರ ಹಾಗೂ ಸಹ ಕಾರ್ಯದರ್ಶಿ ಗುಲಾಬ ಬಡಗಿ ಅವರು, ಕಳೆದ 10 ವರ್ಷ ದುರಾಡಳಿತ ನೀಡಿದ ಯುಪಿಎ ಸರ್ಕಾರ ಹಾಗೂ ಒಂದು ವರ್ಷ ಅಧಿಕಾರ ನಡೆಸಿದ ರಾಜ್ಯ ಸರ್ಕಾರಗಳು ರೈತರನ್ನು ಕಡೆಗಣಿಸಿ, ಭ್ರಷ್ಟ ಆಡಳಿತದ ಮೂಲಕ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ, ಬಡ ರೈತರನ್ನು ಕಡೆಗಣಿಸಿರುವುದು ಪ್ರಸಕ್ತ ಚುನಾವಣೆಯ ಹಿನ್ನಡೆಗೆ ಕಾರಣವಾಗಿದೆ. ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ವಿಧಾನಸಭೆ ವಿಸರ್ಜಿಸಿ ಪುನಃ ಜನಾದೇಶ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಪ್ರಸಕ್ತ ಚುನಾವಣೆಯಲ್ಲಿ ಹಾವೇರಿ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಶಿವಕುಮಾರ ಉದಾಸಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಅವರು, ಮುಂಬರುವ ದಿನಗಳಲ್ಲಿ ರೈತರ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದಲ್ಲಿ ರೈತರ ಧ್ವನಿಯಾಗಿ ಕಾರ್ಯ ನಿರ್ವಹಿಸಬೇಕೆಂದೂ ಅವರು ಮನವಿ ಮಾಡಿದ್ದಾರೆ.
--
ಸಿಡಿಲು ಬಡಿದು ಕುರಿ ಕಾಯುವ ಬಾಲಕ ಸಾವು
ಹಾನಗಲ್ಲ: ತಾಲೂಕಿನ ಕಲಗುಡ್ಡಿ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾರ ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಚಿಕ್ಕೋಡಿ ತಾಲೂಕಿನ ಶಿರಗಾವ್ ಗ್ರಾಮದ ಸುರೇಶ ವಿಠ್ಠಲ್ ಹೆಗಡೆ ಎಂಬುವವರಿಗೆ ಸೇರಿದ ಕುರಿಗಳನ್ನು ಮೇಯಿಸಲು ಹಾನಗಲ್ಲ ತಾಲೂಕಿನ ಕಲಗುಡ್ಡಿ ಗ್ರಾಮಕ್ಕೆ ಈ ಬಾಲಕನ ತಂದೆ ಬಂದಿದ್ದರು. ಈ ಗ್ರಾಮದ ಬಸಪ್ಪ ಈರಣ್ಣನವರ್ ಎಂಬುವವರಿಗರ ಸೇರಿದ ಗ್ರಾಮದ ಹೊರವಲಯದಲ್ಲಿನ ಹೊಲವೊಂದರಲ್ಲಿ ಕುರಿ ಮೇಯಿಸುವ ಸಮಯದಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರು ಸಮೀಪದ ಚಿನ್ನನಹಳ್ಳಿ ಗ್ರಾಮದ ಮಾರುತಿ ಅಂಜನಪ್ಪ ಚಿನ್ನನಹಳ್ಳಿ (12) ಎಂಬ ಬಾಲಕನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಸೋಮವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಕುರಿತು ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

