ಸಾಹಿತ್ಯ ಸಮ್ಮೇಳನ ಕುರಿತು ಗೊಂದಲ ಮೂಡಿಸಬೇಡಿ
ರಾಣಿಬೆನ್ನೂರು: 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ ರಾಣಿಬೆನ್ನೂರು ನಗರದಲ್ಲಿಯೇ ನಡೆಸಲು ಕೇಂದ್ರ ಸಮಿತಿ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದ್ದು, ಕೆಲವರು ಉದ್ದೇಶಪೂರ್ವಕವಾಗಿ ಸಮ್ಮೇಳನ ನಡೆಸುವ ಕುರಿತಂತೆ ಸಾಹಿತ್ಯಾಭಿಮಾನಿಗಳಲ್ಲಿ ಗೊಂದಲ ಹುಟ್ಟಿಸುತ್ತಿರುವುದು ವಿಷಾದನೀಯ ಎಂದು ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಎಚ್.ಎಸ್. ಮುದಿಗೌಡ್ರ ಹಾಗೂ ಕೋಶಾಧ್ಯಕ್ಷ ಜಯಣ್ಣ ಕರಡೇರ ಹೇಳಿದ್ದಾರೆ.
ಅವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿ, ಕೆಲ ದಿನಗಳ ಹಿಂದೆ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಮಾರುತಿ ಶಿಡ್ಲಾಪುರ ಸಮ್ಮೇಳನ ಕುರಿತು ಪತ್ರಿಕೆಗಳಲ್ಲಿ ಹೇಳಿಕೆಗಳನ್ನು ನೀಡುವುದರೊಂದಿಗೆ ಜಿಲ್ಲೆಯ ಸಮಸ್ತ ಸಾಹಿತ್ಯಾಭಿಮಾನಿಗಳ ಭಾವನೆಗೆ ಧಕ್ಕೆ ತರುವಂಥ ಕೆಲಸ ಮಾಡಿದ್ದಾರೆ ಇದು ಶೋಭೆ ತರುವಂತಹದ್ದಲ್ಲ ಎಂದು ಮುದಿಗೌಡ್ರ ಹಾಗೂ ಕರಡೇರ ಸ್ಪಷ್ಟಪಡಿಸಿದ್ದಾರೆ.
ಹಾವೇರಿ ಜಿಲ್ಲಾ ಕಸಾಪ ಸಮಿತಿ ಒಮ್ಮತದ ಠರಾವಿನ ಮೇರೆಗೆ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಣಿಬೆನ್ನೂರಿನಲ್ಲಿಯೇ ನಡೆಸಲು ಕೇಂದ್ರ ಸಮಿತಿಯು ಅನುಮೋದಿಸಿ ಒಪ್ಪಿಗೆ ನೀಡಿದ್ದು ಇದು ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಚರ್ಚೆಯಾಗಿ ಬಹುಮತದಿಂದ ಕೈಗೊಂಡಿರುವ ನಿರ್ಣಯವಾಗಿದೆ. ವಾಸ್ತವ ಸಂಗತಿ ಹೀಗಿರುವಾಗ ಇದರ ಕುರಿತು ಸಾರ್ವಜನಿಕರ ಅಭಿಪ್ರಾಯ ಕೇಳುವ ಅಗತ್ಯವೂ ಇಲ್ಲ. ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿ ಸಮಸ್ಯೆ ಬಗೆಹರಿಸಲಾಗದು. ತಾವು ಅಧಿಕಾರದಲ್ಲಿದ್ದಾಗ ಸಮಿತಿ ನಿರ್ಧಾರ ಕೈಗೊಂಡಿತ್ತೋ ಅಥವಾ ಸಾರ್ವಜನಿಕರು ನಿರ್ಧಾರ ಕೈಗೊಂಡಿದ್ದರೋ ಎಂಬುದನ್ನು ಶಿಡ್ಲಾಪುರ ಅವರು ಮೊದಲು ಅರಿತು ಮಾತನಾಡಬೇಕು ಎಂದು ತಿರುಗೇಟು ನೀಡಿದರು. ಜಿಲ್ಲೆಯ ಎಲ್ಲ ತಾಲೂಕು ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು ಭಿನ್ನಾಭಿಪ್ರಾಯಗಳನ್ನು ಮರೆತು ಏಕತೆಯಿಂದ 81ನೇ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ವಿಶಾಲ ಹೃದಯಿಗಳಾಗಲು ಮುಂದಾಗಬೇಕೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

