ಹೇಳಿಕೆ ತಪ್ಪಾಗಿ ಅರ್ಥೈಸುವಿಕೆ
ರಾಣಿಬೆನ್ನೂರು: ಜಿಲ್ಲಾ ಕೇಂದ್ರದಲ್ಲಿ ನಾನು ಕಳೆದ 3 ದಿನಗಳ ಹಿಂದೆ ನೀಡಿದ್ದ ಪತ್ರಿಕಾ ಹೇಳಿಕೆಯನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದು ನನ್ನ ಮನಸ್ಸಿನ ಮೇಲೆ ನೋವನ್ನುಂಟು ಮಾಡಿದೆ. ನಾನು ಯಾವುದೇ ಸಮಾಜದ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಶಾಸಕ ಕೆ.ಬಿ.ಕೋಳಿವಾಡ ಸ್ಪಷ್ಟೀಕರಣ ನೀಡಿದ್ದಾರೆ. 15 ವರ್ಷಗಳ ಕಾಲ ಈ ಭಾಗದಲ್ಲಿ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಯೊಬ್ಬರು ಲೋಕಸಭಾ ಸದಸ್ಯರಾಗಲು ಶ್ರಮಿಸಿದ ಕೀರ್ತಿ ನನ್ನದಾಗಿದ್ದು ಅಲ್ಪಸಂಖ್ಯಾತರಿಗೆ ಲೋಕಸಭಾ ಟಿಕೇಟ್ ನೀಡಬೇಡಿ ಎಂದು ನಾನು ಹೇಳಿಲ್ಲವೆಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಪ ಸಂಖ್ಯಾತ ಮುಖಂಡರಾದ ಅಜ್ಜಂಪೀರ್ ಖಾದ್ರಿ, ಮಾಜಿ ಶಾಸಕ ಹಾಗೂ ಹಾವೇರಿ ನಗರಸಭೆ ಅಧ್ಯಕ್ಷ ಎ.ಐ. ಪಠಾಣ ಅವರು ಇದೇ ಅಭಿಪ್ರಾಯವನ್ನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಹಾವೇರಿಗೆ ಬಂದಾಗ ಅವರ ಸಮಕ್ಷಮ ಇವರು ಹೇಳಿದ್ದುಂಟು. ಮಂಗಳೂರು, ಬೆಂಗಳೂರು ಕೇಂದ್ರ, ಬೀದರ್ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರಗಳಿಗೆ 4 ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ನಾನು ನನ್ನ ಅಭಿಪ್ರಾಯವನ್ನು ಸಭೆಯಲ್ಲಿ ಮಂಡಿಸಿದ್ದೆ ಹೊರತು ಅಲ್ಪಸಂಖ್ಯಾತರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

