ಅರಣ್ಯ ಇಲಾಖೆ ನೌಕರರ ಪ್ರತಿಭಟನೆ

Updated on: 

ಮಡಿಕೇರಿ: ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಅರಣ್ಯ ಇಲಾಖಾ ದಿನಗೂಲಿ ನೌಕರರು ಪ್ರತಿಭಟನೆ ನಡೆಸಿದರು. ಸರ್ಕಾರ ಕೂಡಲೇ ಪ್ರತಿಭಟನೆಗೆ ಸ್ಪಂದಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗವುದು. ಅದಕ್ಕೂ ಸರ್ಕರ ಸೂಕ್ತ ಸ್ಪಂದನೆ ನೀಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೂಳ್ಳುವುದಾಗಿ ಎಚ್ಚರಿಸಿದರು.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ತೆರಳಿದ ಅರಣ್ಯ ಇಲಾಖೆಯ ದಿನಗೂಲಿ ನೌಕರರು ಅರಣ್ಯ ಇಲಾಖೆವರೆಗೆ ತೆರಳಿ ಅಲ್ಲಿ ಸಮಾವೇಶಗೊಂಡರು.
ಜಿಲ್ಲೆಯಲ್ಲಿರುವ ಅರಣ್ಯ ಇಲಾಖೆಯ ಸುಮಾರು 100ಕ್ಕೂ ಅಧಿಕ ದಿನಗೂಲಿ ನೌಕರರನ್ನು ಕೂಡಲೇ ಕಾಯಂಗೊಳಿಸಬೇಕು, ಮಾಸಿಕ ವೇತನವನ್ನು ಬ್ಯಾಂಕಿನ ಮೂಲಕ ಬಟವಾಡೆ ಮಾಡಬೇಕು, ಸರ್ಕಾರ ಖಾಲಿ ಹುದ್ದೆಗಳನ್ನು ತುಂಬುವಾಗ ಮೊದಲ ಆದ್ಯತೆಯನ್ನು ತಮಗೆ ನೀಡಬೇಕು, ತಾರತಮ್ಯವನ್ನು ಹೋಗಲಾಡಿಸಬೇಕು, ಪ್ರಸ್ತುತ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ನೀಡಬೇಕು ಎಂಬ ಬೇಡಿಕೆಗಳನ್ನು ಧರಣಿ ನಿರತರು ಅಧಿಕಾರಿಗಳ ಮುಂದಿಟ್ಟರು.
ಸರ್ಕಾರ ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಸಿದರಲ್ಲದೆ ಇದಕ್ಕೂ ಸರ್ಕಾರ ಸ್ಪಂದಿಸದಿದ್ದರೆ ನೌಕರ ವರ್ಗದವರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದೇವು ಎಂದೂ ಎಚ್ಚರಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ಅರಣ್ಯ ಇಲಾಖಾ ದಿನಗೂಲಿ ನೌಕರರ ಸಂಘದ ಅಧ್ಯಕ್ಷ ಎ.ಎಂ. ನಾಗರಾಜ್ ವಹಿಸಿದ್ದರು. ಬೆಂಗಳೂರು ಘಟಕದ ಅಧ್ಯಕ್ಷ ಮುನಿರಾಜು, ಕೋಲಾರ ಘಟಕದ ಗೋಪಾಲ್, ಬನ್ನೂರು ಘಟಕದ ವೆಂಕಟೇಶ್, ಹುಣಸೂರು ಘಟಕದ ರಾಜಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com