ರಂಜನ್, ಬೋಪಯ್ಯ ರಾಜಿನಾಮೆಗೆ ಆಗ್ರಹ

Updated on: 

ಮಡಿಕೇರಿ: ಅಕ್ರಮ- ಸಕ್ರಮ ಸಮಿತಿಯಡಿ ನಡೆದಿದೆ ಎನ್ನಲಾದ ಭೂ ಹಗರಣಗಳ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನಸಭಾಧ್ಯಕ್ಷರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ   ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಟಿ. ಪ್ರದೀಪ್, ಮಾಜಿ ಸಚಿವೆ ಸುಮಾವಸಂತ್, ಡಿಸಿಸಿ ಮಾಜಿ ಅಧ್ಯಕ್ಷೆ ವೀಣಾ ಅಚ್ಚಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಧಿಕ್ಕಾರ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿದರು.
'ಅಕ್ರಮ- ಸಕ್ರಮ ಸಮಿತಿ ವಜಾಗೊಳಿಸಿ' ಎಂಬ ಬೇಡಿಕೆಯ ಘೋಷಣೆ ಸೇರಿದಂತೆ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಜಿಲ್ಲೆಯ ಜನ ಪ್ರತಿನಿಧಿಗಳು ಅಧಿಕಾರದಲ್ಲಿ ಮುಂದುವರೆದರೆ ಭೂ ಹಗರಣದ ಪ್ರಕರಣ ಮುಚ್ಚಿ ಹೋಗುವ ಸಾಧ್ಯತೆಗಳಿದೆಯಾದ್ದರಿಂದ, ಅವರಿಂದ ರಾಜಿನಾಮೆ ಪಡೆದುಕೊಳ್ಳುವಂತೆ ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ. ಪ್ರದೀಪ್ ಮಾತನಾಡಿ, ಭೂ ಹಗರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತದ ಮೂಲಕ ಕೂಲಂಕಷ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿ.ಪಂ. ಸದಸ್ಯಯರಾದ ಸರಿತಾ ಪೂಣಚ್ಚ, ಶಕುಂತಳಾ ರವೀಂದ್ರ, ಜಿಲ್ಲಾ ಕಾಂಗ್ರೆಸ್ ವಕ್ತಾರ ನೆರವಂಡ ಉಮೇಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕುಮುದ ಧರ್ಮಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ಪಾಪು ಸಣ್ಣಯ್ಯ, ಬಿ.ಎಸ್. ತಮ್ಮಯ್ಯ, ವಿ.ಪಿ. ಸುರೇಶ್, ನಗರಸಭಾ ಸದಸ್ಯರಾದ ಟಿ.ಎಂ. ಅಯ್ಯಪ್ಪ, ಅಬ್ದುಲ್ ರಜಾಕ್, ಕೊಲ್ಯದ ಗಿರೀಶ್, ಕಿಶನ್ ಪೂವಯ್ಯ, ಕಣ್ಣಂಡ ಸಂಪತ್, ಎಸ್.ಎಂ. ಚಂಗಪ್ಪ ಸೇರಿದಂತೆ ಹಲ ಪ್ರಮುಖರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com