ಮಡಿಕೇರಿ: ಉಪಮುಖ್ಯಮಂತ್ರಿ ಆರ್. ಅಶೋಕ ಅವರು ಫೆ.9 ಮತ್ತು 10ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 9 ರಂದು ಮಧ್ಯಾಹ್ನ 1 ಗಂಟೆಗೆ ಮೈಸೂರಿನಿಂದ ಹೊರಟು ಮಧ್ಯಾಹ್ನ 3 ಗಂಟೆಗೆ ಸೋಮವಾರಪೇಟೆ ತಾಲೂಕಿನ ಮಾದಾಪುರಕ್ಕೆ ಆಗಮಿಸಿ ಕೊಡವ ಅಕಾಡೆಮಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ 4.30ಕ್ಕೆ ಮಾದಪುರದಿಂದ ಹೊರಟು ಸಂಜೆ 5 ಗಂಟೆಗೆ ಸೋಮವಾರಪೇಟೆ ಬಸ್ನಿಲ್ದಾಣದ ಅಭಿವೃದ್ಧಿ ಕೆಲಸಗಳ ಶಂಕುಸ್ಥಾಪನೆ ಮಾಡಲಿದ್ದಾರೆ. ಅನಂತರ ಸೋಮವಾರಪೇಟೆಯಿಂದ ಸಂಜೆ 6 ಗಂಟೆಗೆ ಮಡಿಕೇರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಫೆ10 ರಂದು ತೆರಳುವರು.