ಮಡಿಕೇರಿ/ಸುಬ್ರಹ್ಮಣ್ಯ: ಮಡಿಕೇರಿ ನಗರ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಹಾಗೂ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಡಿಕೇರಿ ನಗರದಲ್ಲಿಗುಡುಗಿನೊಂದಿಗೆ ಸುರಿದ ಮಳೆಯಿಂದಾಗಿ 2 ಗಂಟೆಗಳ ಕಾಲ ರಸ್ತೆಯಲ್ಲಿ ನೀರು ಹರಿದಿದ್ದು, ಮಳೆಗಾಲದ ದಿನಗಳನ್ನು ನೆನಪಿಸುತ್ತಿತ್ತು. ಸೆಖೆಯಿಂದ ಕೂಡಿದ್ದ ವಾತಾವರಣದಲ್ಲಿ ಚಳಿಯ ಅನುಭವವಾಯಿತು. ಮಳೆಯಿಂದಾಗಿ ಸಂಜೆಯವರೆಗೂ ಜನ ಕೊಡೆ ಹಿಡಿದು ಸಾಗಿದರು. ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿದ ಗುಡುಗು ಸಹಿತ ಭಾರಿ ಮಳೆಯಿಂದ ಭಕ್ತಾದಿಗಳು ತೊಂದರೆಪಡುವಂತಾಯಿತು.