ಇಂದಿನ ಬೃಹತ್ ಜಾಥಾಕ್ಕೆ ಎಐಟಿಯುಸಿ ಸಂಘಟನೆ ಬೆಂಬಲ
ಸೋಮವಾರಪೇಟೆ: ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದವರು ಫೆ.15ರಂದು ಮಡಿಕೇರಿಯಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಜಾಥಾ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮಕ್ಕೆ ಜಿಲ್ಲೆಯ ಎಐಟಿಯುಸಿ ಸಂಘಟನೆ ಸಂಪೂರ್ಣ ಬೆಂಬಲ ಸೂಚಿಸಿದೆ. ಈ ಕುರಿತು ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಸೋಮಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ.20 ರಂದು 12 ಕಾರ್ಮಿಕರ ಸಂಘಟನೆಗಳು ರಾಷ್ಟ್ರವ್ಯಾಪಿ ಚಳುವಳಿಗೆ ಕರೆ ನೀಡಿರುವುದರಿಂದ, ಮಡಿಕೇರಿಯಲ್ಲಿ ಇಂದು ನಡೆಯುವ ಪ್ರತಿಭಟನಾ ಮೆರವಣಿಗೆಗೆ, ತೋಟದ ಕಾರ್ಮಿಕರು ಕೆಲಸಕ್ಕೆ ಗೈರು ಹಾಜರಾಗಿ ಒಂದು ದಿನದ ಚಳುವಳಿಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಕವನ ಆಹ್ವಾನ
ಮಡಿಕೇರಿ: ಮಾರ್ಚ್ 13ರಂದು ಕುಟ್ಟದಲ್ಲಿ ನಡೆಯಲಿರುವ ವಿರಾಜಪೇಟೆ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅಂದು ಕವಿಗೋಷ್ಠಿ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ವಿರಾಜಪೇಟೆ ತಾಲೂಕಿನ ಆಸಕ್ತ ಕವಿಗಳಿಂದ ಕವಿಗೋಷ್ಠಿಗಾಗಿ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ.
ಒಬ್ಬರು ಗರಿಷ್ಠ 3 ಕವನಗಳನ್ನು ಕಳುಹಿಸಬಹುದಾಗಿದೆ. ಬಳಿಕ ಸಮಿತಿ ಅಂತಿಮಗೊಳಿಸಿದ ಕವನಗಳನ್ನು ಕವಿಗೋಷ್ಠಿಯಲ್ಲಿ ವಾಚಿಸಬೇಕಾಗಿದೆ. ಆಸಕ್ತರು ಎ 4 ಅಳತೆಯ ಹಾಳೆಯಲ್ಲಿ ತಮ್ಮ ಕವನಗಳನ್ನು ಬರೆದು ಫೆ. 25ರೊಳಗಾಗಿ ರಫೀಕ್ ತೂಚಮಕೇರಿ, ಪ್ರಧಾನ ಸಂಪಾದಕರು, ವಿರಾಜಪೇಟೆ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಸ್ಮರಣ ಸಂಚಿಕೆ ವಿಭಾಗ, 3ನೇ ಮಹಡಿ, ಎ.ಪಿ. ಕಾಂಪ್ಲೆಕ್ಸ್, ಬಸ್ ನಿಲ್ದಾಣದ ಮುಂಭಾಗ ಗೋಣಿಕೊಪ್ಪಲು ಎಂಬ ವಿಳಾಸಕ್ಕೆ ಕಳುಹಿಸಬೇಕಾಗಿದೆ. ಕವನ ಕಳುಹಿಸುವವರು ಕಡ್ಡಾಯವಾಗಿ ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಇತ್ತೀಚಿನ ಒಂದು ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಲಗತ್ತಿಸಿರಬೇಕು. ಮಾಹಿತಿಗಾಗಿ 9886060342ನ್ನು ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

