ಕೊಡಗು

ಮಕ್ಕಳ ವರ್ತನೆ ಮೇಲೆ ನಿಗಾ ವಹಿಸಿ: ರಂಜನ್

Published On :

ಶನಿವಾರಸಂತೆ: ಪೋಷಕರು ತಮ್ಮ ಮಕ್ಕಳ ಚಲನವಲನಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಅವರು ಸೋಮವಾರ ಸ್ಥಳೀಯ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮದ ಪ.ಪೂ. ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಮೇಲ್ತಂಸ್ತಿನ ಕಟ್ಟಡ ಉದ್ಘಾಟಿಸಿ, ನಂತರ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯವಾದದ್ದು. ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದರೆ ಸರ್ಕಾರ ಅಂಥ ಮಕ್ಕಳಿಗೆ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡುತ್ತದೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಕಲಿಕೆಯ ಬಗ್ಗೆ ಪದೇಪದೇ ಶಾಲೆಗಳಿಗೆ ಹೋಗಿ ಭೇಟಿ ನೀಡಿ ಪರಿಶೀಲಿಸುತ್ತಿರಬೇಕು. ಉತ್ತಮ ಅಂಕಪಡೆದ ಬಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಅವರಿಗಾಗಿ ಉತ್ತಮ ಶಿಕ್ಷಣ ಕೊಡಿಸಲು ಸರ್ಕಾರ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷರು ವಿದ್ಯಾರ್ಥಿಗಳೊಂದಿಗೆ ಸ್ನೇಹಿತರಂತೆ ವರ್ತಿಸಿ ದಾರಿತಪ್ಪುವ ವಿದ್ಯಾರ್ಥಿಗಳನ್ನು ಗಮನಿಸಿ ಮನವೊಲಿಸಿ ಸರಿಯಾದ ದಾರಿಗೆ ತರಲು ಪ್ರಯತ್ನಿಸಬೇಕು ಎಂದ ಸಚಿವರು ಪ್ರಸ್ತುತ ಸರ್ಕಾರ ರಾಜ್ಯದಲ್ಲಿ 500 ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಿದೆ. ಶಿಕ್ಷಣ ಪಡೆದ ವಿದ್ಯಾವಂತರು ಕನಿಷ್ಠವಾದರೂ, ಸಮಾಜದಲ್ಲಿ ಉತ್ತಮ ನಾಗರಿಕ ಎನ್ನಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಚಿವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷೆ ಭುವನೇಶ್ವರಿ ಹರೀಶ್, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಎನ್. ರಘು, ವಿದ್ಯಾಸಂಸ್ಥೆ ಪ್ರಾಂಶುಪಾಲ ಫಾ.ಸಿ.ಬಿ. ಸೆಬಾಸ್ಟಿನ್, ಆಡಳಿತ ಮಂಡಳಿ, ವಿದ್ಯಾಸಂಸ್ಥೆ ಪ್ರಮುಖರು ಮುಂತಾದವರಿದ್ದರು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.