ನಿವೇಶನರಹಿತರಿಗೆ ಹಕ್ಕು ಪತ್ರ ನೀಡಿ

Updated on: 

ಮಡಿಕೇರಿ: ಪೈಸಾರಿ ಜಾಗದಲ್ಲಿ ವಾಸ ಮಾಡುತ್ತಿರುವ ನಿವೇಶನರಹಿತರಿಗೆ ಹಕ್ಕು ಪತ್ರ ನೀಡಬೇಕೆಂದು ಒತ್ತಾಯಿಸಿ ಕೊಡಗು ಪ್ರಗತಿ ಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಿತು. ಜಿಲ್ಲಾಧಿಕಾಗಳ ಕಚೇರಿ ಮುಂಭಾಗ ಸಾವಿರಾರು ನಿವೇಶನರಹಿತರು ಧರಣಿ ಸತ್ಯಾಗೃಹ ನಡೆಸಿದರು.
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಮಹಾದೇವ್, ಆದಿ ಕರ್ನಾಟಕ ಸಂಘದ ಅಧ್ಯಕ್ಷೆ ಎಚ್.ಬಿ. ಜಯಮ್ಮ, ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಪಿ. ರಮೇಶ್ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ನಗರದ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಸಂಖ್ಯೆಯ ಕಾರ್ಮಿಕ ಸಮೂಹ ನಗರದ ಪ್ರಮುಖ ಬೀದಿಗಳಲ್ಲಿ ಘೋಷಣೆಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ ಬಳಿಕ ಕೋಟೆಯಾವರಣದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕರರು 1 ಗಂಟೆಗೂ ಹೆಚ್ಚಿನ ಕಾಲ ಮುಷ್ಕರ ನಡೆಸಿದರು. ನಿವೇಶನರಹಿತರಿಗೆ ಹಕ್ಕು ಪತ್ರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕೊಡಗು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ  ಪಿ.ಆರ್. ಭರತ್, ಹಿರಿಯ ವಕೀಲ ಎ.ಕೆ. ಸುಬ್ಬಯ್ಯ ಮಾತನಾಡಿದರು.
ಒಕ್ಕೂಟದ ಜಿಲ್ಲಾ ಕಾರ್ಯಾಧ್ಯಕ್ಷ ಡಿ.ಎಸ್. ನಿರ್ವಾಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಜೆ. ವಿನ್ಸೆಂಟ್‌ಬಾಬು, ಜಂಟಿ ಕಾರ್ಯದರ್ಶಿ  ಟಿ.ಎನ್. ಗೋವಿಂದಪ್ಪ, ಕೆ.ಟಿ. ಬೇಬಿ ಮ್ಯಾಥ್ಯು, ಸೋಮವಾರಪೇಟೆ ತಾಲೂಕು ಕಾರ್ಯದರ್ಶಿ ಜಯಪ್ಪ ಹಾನಗಲ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಡಿಕೇರಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com