ಸೋಮವಾರಪೇಟೆ: ದೇಶದ ಸಂವಿಧಾನವು ಸ್ವಾತಂತ್ರ್ಯ, ಸಮಾನತೆ, ಸಹೋದರತೆಯಿದ ಕೂಡಿದ್ದು ಅದರ ಆಚರಣೆಗೆ ಪ್ರತಿಯೊಬ್ಬರೂ ಮುಂದಾಗಬೇಕೆಂದು ಆರಕ್ಷಕ ವೃತ್ತ ನಿರೀಕ್ಷಕ ಎಚ್.ಎನ್.ಸಿದ್ದಯ್ಯ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಶಾಖೆಯ ವತಿಯಿಂದ ಇಲ್ಲಿನ ಡಾ. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಮಿತಿಯ ಜಿಲ್ಲಾ ಸಂಚಾಲಕ ಜಯಪ್ಪ ಹಾನಗಲ್, ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ, ಮಹಿಳಾ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕಿ ಪ್ರೇಮ ವಸಂತ್, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ಜವರ, ಕಾಂತರಾಜ್, ಮಂಜುನಾಥ್, ಪ್ರಮಿಳಾ ಧರ್ಮಪ್ಪ, ಮಂಜುಳಾ ಮಂಜುನಾಥ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಬಿ.ಎಸ್.ದಿನೇಶ್ ಸ್ವಾಗತಿಸಿ, ವಂದಿಸಿದರು.