ಇಂದು ಆಧ್ಯಾತ್ಮಿಕ ಕಲಾ ವೈಭವ, ಚಿತ್ರ ಪ್ರದರ್ಶನ
ಮಡಿಕೇರಿ: ಮಡಿಕೇರಿಯ ದಾಸವಾಳ ರಸ್ತೆಯಲ್ಲಿನ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾನಿಲಯದಲ್ಲಿ 77 ನೇ ತ್ರಿಮೂರ್ತಿ ಶಿವಜಯಂತಿ ಮಹೋತ್ಸವ ಅಂಗವಾಗಿ ಮರಳಿನಲ್ಲಿ ಆಧ್ಮಾತ್ಮಿಕ ಕಲಾ ವೈಭವ ಮತ್ತು ಆಧ್ಯಾತ್ಮಿಕ ಚಿತ್ರ ಪ್ರದರ್ಶನದ ಉದ್ಘಾಟನೆ ಭಾನುವಾರ ಸಂಜೆ 6 ಗಂಟೆಗೆ ನಡೆಯಲಿದೆ.
ಕಲಾಕೃತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠ ಅನುಚೇತ್ ಅನಾವರಣಗೊಳಿಸಲಿದ್ದು, ಚಿತ್ರಕಲಾ ಪ್ರದರ್ಶನವನ್ನು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಸುರೇಶ್‌ಚಂಗಪ್ಪ ಉದ್ಘಾಟಿಸಲಿದ್ದಾರೆ. ಆಕಾಶವಾಣಿ ನಿಲಯದ ನಿರ್ದೇಶಕಿ ಇಂದಿರಾ ವೈ. ಗಜರಾಜ್, ನಗರಸಭಾ ಸದಸ್ಯ ಬಿ.ಎಂ. ರಾಜೇಶ್ ಪಾಲ್ಗೊಳ್ಳಲಿದ್ದಾರೆ. ಮೈಸೂರಿನ ಸಮರ್ಪಿತ ಸಹೋದರರಾದ ಬ್ರಹ್ಮಕುಮಾರ್ ಪ್ರಾಣೇಶ್ ಶಿವರಾತ್ರಿ ಆಧ್ಯಾತ್ಮಿಕ ರಹಸ್ಯ ಎಂಬ ವಿಚಾರದ ಬಗ್ಗೆ ಮಾತನಾಡಲಿದ್ದು, ಬ್ರಹ್ಮಕುಮಾರೀಸ್‌ನ ಜಿಲ್ಲಾ ಸಂಚಾಲಕ ರಾಜಯೋಗೀನಿ ಗಾಯಿತ್ರಿಜೀ ಅಧ್ಯಕ್ಷತೆ ವಹಿಸಲಿದ್ದಾರೆ.
ಮಳೆಮಲ್ಲೇಶ್ವರ ಬೆಟ್ಟದಲ್ಲಿ ಇಂದು ಜಾತ್ರೋತ್ಸವ
ಶನಿವಾರಸಂತೆ: ಶಿವರಾತ್ರಿ ಹಬ್ಬದ ಪ್ರಯುಕ್ತ ಇಲ್ಲಿನ ಸಮೀಪದ ಮಾಲಂಬಿ ಮಳೆಮಲ್ಲೇಶ್ವರ ದೇವಾಲಯದಲ್ಲಿ ಭಾನುವಾರ ಮಲ್ಲೇಶ್ವರ ಬೆಟ್ಟದಲ್ಲಿರುವ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ. ಭಾನುವಾರ ಬೆಳಗ್ಗೆ 7ಗಂಟೆಯಿಂದ 1.30ರವರೆಗೆ ದೇವತಾಪೂಜೆ, 12.30 ಗಂಟೆಗೆ ಮಹಾಮಂಗಳಾರತಿ ಕಾರ್ಯಕ್ರಮ ನಡೆಯಲಿದೆ. ಬೆಟ್ಟದ ಮೇಲಿರುವ ದೇವಾಲಯದ ಪ್ರಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು, ಪದವಿಪೂರ್ವ, ಪದವಿ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗಾಗಿ ಕೋಲಾಟ ಸ್ಪರ್ಧೆ ಮತ್ತು ವೈಯಕ್ತಿಕ ಭಾವಗೀತೆ ಅಥವಾ ಜಾನಪದಗೀತೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ದೇವಾಲಯದ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

