ಜನಜಾಗೃತಿಗಾಗಿ ಬೀದಿ ನಾಟಕ
ಶನಿವಾರಸಂತೆ: ಸುಳ್ಯದ ನೆಹರು ಮೆಮೋರಿಯಲ್ ಸಮೂಹ ವಿದ್ಯಾಸಂಸ್ಥೆಯ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಶೈಕ್ಷಣಿಕ ಗ್ರಾಮೀಣ ಅಧ್ಯಯನ ಶಿಬಿರದ ಮತ್ತು ಸ್ಥಳೀಯ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸ್ಥಳೀಯ ಬಿ.ಚಿ.ಜೆ. ಕಾಂಪ್ಲೆಕ್ಸ್ ಆವರಣದಲ್ಲಿ ಸಾರ್ವಜನಿಕರಿಗೆ ಬಾಲ್ಯ ವಿವಾಹ, ಮದ್ಯಪಾನ, ಹೆಣ್ಣು ಮಕ್ಕಳ ಸುರಕ್ಷೆ ಕುರಿತು ಬೀದಿ ನಾಟಕವನ್ನು ಏರ್ಪಡಿಸಲಾಯಿತು.
ಬೀದಿ ನಾಟಕದ ಮೂಲಕ ಜನಜಾಗೃತಿಗೊಳಿಸಿದ ವಿದ್ಯಾರ್ಥಿಗಳು, ಮದ್ಯಪಾನದ ಚಟಕ್ಕೆ ಬಲಿಯಗಿ ಇಡೀ ಕುಟುಂಬ ಬೀದಿಗೆ ಬರುವುದರ ಕುರಿತು, ಅಪ್ರಾಪ್ತ ವಯಸ್ಸಿನಲ್ಲಿ ಹೆಣ್ಣು ಮಕ್ಕಳನ್ನು ಮದುವೆ ಮಾಡುವುದರಿಂದ ಮುಂದೆ ಆಗುವ ತೊಂದರೆ, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕಾರ್ಮಿಕರಾಗಿ ದುಡಿಸಿಕೊಳ್ಳುವುದು ಇದರ ಪರಿಣಾಮ, ಸಮಾಜದಲ್ಲಿ ಹೆಣ್ಣು ಮಕ್ಕಳಿರುವ ಬಗ್ಗೆ ತಾತ್ಸಾರ ಮಾಡುವುದು ಮತ್ತು ಹೆಣ್ಣುಮಕ್ಕಳ ಸುರಕ್ಷೆಯ ಕುರಿತು ಬೀದಿನಾಟಕದ ಮೂಲಕ ಅರಿವು ಮೂಡಿಸಿದರು.
ಇದರೊಂದಿಗೆ ಶಿಕ್ಷಣದ ಮಹತ್ವ, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾ.ಪಂ. ಸಮಿತಿಗಳ ಅವಶ್ಯಕತೆಗಳ ಬಗ್ಗೆಯೂ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಸಮೂಹ ವಿದ್ಯಾಸಂಸ್ಥೆಯ ಸ್ನಾತಕ್ಕೋತ್ತರ ವಿಭಾಗದ ಉಪನ್ಯಾಸಕರಾದ ಮೀನಕುಮಾರಿ, ಟಿ.ಎಸ್. ನಿಶ್ಚಲ, ಶುಭಮಂಗಳ, ವಿನೋದ್, ತರಬೇತುದಾರರಾದ ಮುಖೇಶ್, ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಲೆಸ್ .ಎಂ ಉಮಾಶಂಕರ್, ಪ.ಪೂ. ಕಾಲೇಜಿನ ಉಪನ್ಯಾಸಕ ಎಂ. ನಾಗೇಶ್, ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿವಕುಮಾರ್, ನವ್ಯಶ್ರೀ ಕ್ಲಿನಿಕ್ ತೀರ್ಥಕುಮಾರ್ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

