20ರಂದು ಜಿಪಂ ಕೆಡಿಪಿ ಸಭೆ
ಮಡಿಕೇರಿ: ಕರ್ನಾಟಕ ಅಭಿವೃದ್ಧಿ 20 ಅಂಶಗಳ ಕಾರ್ಯಕ್ರಮದ ಫೆಬ್ರವರಿ ತಿಂಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಮಾ.20ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಬಿ. ಅಂಜನಪ್ಪ ತಿಳಿಸಿದ್ದಾರೆ.
ಇಂದು ಜಿಲ್ಲಾ ಘಟಕ ಉದ್ಘಾಟನೆ
ಮಡಿಕೇರಿ: ಬೆಂಗಳೂರಿನ ಅಖಿಲ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆಯಿಂದ ಬಡ್ತಿ ಪಡೆದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭ ಮಾ.17ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಸ.ಮಾ.ಪ್ರಾ. ಶಾಲೆ ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಘಟಕದ ಅ.ಕ.ರಾ.ಪ್ರಾ.ಶಾ.ಬ.ಪ. ಪ್ರೌಢಶಾಲೆ ಸಹಶಿಕ್ಷಕರ ಸಂಘದ ಅಧ್ಯಕ್ಷೆ ಕೆ.ಎಲ್. ರೋಹಿಣಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಬಿ. ಅಂಜನಪ್ಪ, ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಚ್. ಬಸವರಾಜು ಮತ್ತಿತರರು ಭಾಗವಹಿಸಲಿದ್ದಾರೆ.
ನಾಳೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ
ಮಡಿಕೇರಿ: ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮಾ.18ರಂದು ಬೆಳಗ್ಗೆ 11.30ಕ್ಕೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದೆ ಎಂದು ಮಡಿಕೇರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.
ನಾಳೆ ಪಶು ಚಿಕಿತ್ಸಾ ಶಿಬಿರ
ಮಡಿಕೇರಿ: ಜಿಲ್ಲಾ ಪಂಚಾಯಿತಿ, ತಾ.ಪಂ., ಭಾಗಮಂಡಲ ಗ್ರಾ.ಪಂ., ಸಿಂಡಿಕೆಟ್ ಬ್ಯಾಂಕ್ ಭಾಗಮಂಡಲ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಮಹಿಷಮರ್ದಿನಿ ಸ್ವಸಹಾಯ ಸಂಘ, ತಾವೂರು ಸ್ನೇಹ ಸ್ತ್ರೀಶಕ್ತಿ ಸಂಘ ಸಂಯುಕ್ತ ಆಶ್ರಯದಲ್ಲಿ ಮಾ.18ರಂದು ಬೆಳಗ್ಗೆ 10 ಗಂಟೆಗೆ ತಾವೂರು ಗ್ರಾಮದ ಪ್ರವಾಸಿ ಮಂದಿರ ಮುಂಭಾಗ ಪಶು ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

