ಕುಶಾಲನಗರ: ಅಕ್ರಮವಾಗಿ ವಾಹನದಲ್ಲಿ ಬೀಟೆ ಮರ ಸಾಗಾಟ ಮಾಡುತ್ತಿದ್ದ ವೇಳೆ ಕುಶಾಲನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಲಕ್ಷಾಂತರ ಮೌಲ್ಯದ ಬೀಟೆ ಮರ ವಶಪಡಿಸಿಕೊಳ್ಳುವುದರೊಂದಿಗೆ ಓರ್ವನನ್ನು ವಾಹನ ಸಹಿತ ಬಂಧಿಸಿದ್ದಾರೆ.
ಬುಧವಾರ ಬೆಳಗ್ಗೆ ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಅನೂಪ್ ಮಾದಪ್ಪ ಮತ್ತು ಸಿಬ್ಬಂದಿ ಗಸ್ತು ನಡೆಸುತ್ತಿದ್ದ ಸಂದರ್ಭ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಕಡೆಯಿಂದ ಆಗಮಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವಿಚಾರಣೆ ಸಂದರ್ಭ ಅಕ್ರಮವಾಗಿ ಬೀಟೆ ಮರಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದ ಮುಳ್ಳುಸೋಗೆ ಸೆಲೆಕ್ಟ್ ಮರದ ಮಿಲ್‌ಗೆ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ನೀಡಿರುವುದಾಗಿ ಠಾಣಾಧಿಕಾರಿ ಅನೂಪ್ ಮಾದಪ್ಪ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಾದಾಪಟ್ಟಣ ನಿವಾಸಿ ಮಹಮ್ಮದ್ ಫಬಿಸ್ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರುತಿ ವಾಹನ ಸೇರಿದಂತೆ ಚಟ್ಟಳ್ಳಿಯ ರಫೀಕ್ ಹಾಗೂ ಮಿಲ್ ಮಾಲೀಕ ನಿಜಾಂ ಎಂಬವರ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಶಾಲನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Advertisement