ಮಡಿಕೇರಿ: ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ 2013- 14 ರ ಸಾಲಿನ ವಾರ್ಷಿಕ ಮಹಾಸಭೆಯು 22 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಮಡಿಕೇರಿ ಕಾವೇರಿ ಕಲಾ ಕ್ಷೇತ್ರದಲ್ಲಿ ಸಂಘದ ಅಧ್ಯಕ್ಷೆ ಎ.ಸಿ. ಅಕ್ಕಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿದೆ. 2013- 14ನೇ ಸಾಲಿನಲ್ಲಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತಿದೆ. ಸಭೆಗೆ ರಾಜ್ಯ, ಜಿಲ್ಲೆ ಹಾಗೂ ತಾಲೂಕುಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.