ಮೂರ್ನಾಡು: ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಬುಧವಾರ ಜಾಥಾ ನಡೆಯಿತು. ಜಾಥಾಗೆ ಜಿಪಂ ಸದಸ್ಯ ಕಡ್ಡಿ ಸುಂದರ್ ಚಾಲನೆ ನೀಡಿದರು. ವಿದ್ಯಾರ್ಥಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿ ಘೋಷಣೆ ಕೂಗುತ್ತಾ ಸಾಗಿದರು. ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲೋಕೇಶ್, ಅಂಗನವಾಡಿ ಮೇಲ್ವಿಚಾರಕಿ ಸವಿತಾಜಿಲ್ಲಾ ಸರ್ವೇಕ್ಷಣಾ ಘಟಕದ ಮಂಜುನಾಥ್, ಕಿರಿಯ ಪುರುಷ ಹಾಗೂ ಮಹಿಳಾ ಸಿಬ್ಬಂದಿ ಹಾಜರಿದ್ದರು.