ಕೋಲಾರ

ಜಮೀನು ವಶಕ್ಕೆ ತಹಸೀಲ್ದಾರ್ ಯತ್ನ: ಲೋಕಾಯುಕ್ತ ನಿರೀಕ್ಷಕರಿಗೆ ಮನವಿ

Published On :

ಶಿಡ್ಲಘಟ್ಟ:  ಸರ್ಕಾರಿ ಜಮೀನು ಎಂದು ತಪ್ಪುಗ್ರಹಿಕೆಯಿಂದ ತಮ್ಮ ಜಮೀನುಗಳನ್ನು ತಹಸೀಲ್ದಾರರು ವಶಪಡಿಸಿಕೊಳ್ಳಲು ಹೊರಟಿದ್ದಾರೆ. ತಾವು ನ್ಯಾಯ ಕಲ್ಪಿಸಬೇಕೆಂದು ನೊಂದ ನಾಗರೀಕರು ಜಿಲ್ಲಾ ಲೋಕಾಯುಕ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ತಾಲೂಕಿನ ಹನುಮಂತಪುರ ಸಮೀಪವಿರುವ ಸ.ನಂ. 182ರಲ್ಲಿ ತಮಗೆ ಸೇರಿದ ಜಮೀನುಗಳನ್ನು ತಪ್ಪು ಗ್ರಹಕೆಯಿಂದ ತಹಸೀಲ್ದಾರ್ ಹನುಮಂತರಾಯ ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ. ಇದರಿಂದ ತಮ್ಮಗೆ ಅನ್ಯಾಯವಾಗುತ್ತಿದೆ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದರು. ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕೇಶವಮೂರ್ತಿ ಹಾಗೂ ಫಿದಾಹುಸೇನ್ ನೇತೃತ್ವದಲ್ಲಿ ಲೋಕಾಯುಕ್ತ ನಿರೀಕ್ಷಕರನ್ನು ಭೇಟಿ ಮಾಡಿದ ನಾಗರಿಕರು, ಹಲವು ವರ್ಷಗಳಿಂದ ತಾವು ಹನುಮಂತಪುರ ಗ್ರಾಮದ ಸಮೀಪ ನಿವೇಶನಗಳನ್ನು ಹೊಂದಿ ಹಂಡಿಗನಾಳ ಗ್ರಾಮ ಪಂಚಾಯಿತಿಗಳಿಗೆ ಕಂದಾಯ ಸಹ ಪಾವತಿಸಲಾಗುತ್ತಿದೆ. ಆದರೆ, ತಾಲೂಕು ದಂಡಾಧಿಕಾರಿಗಳು ಏಕಾಏಕಿ ತಮ್ಮ ಜಮೀನುಗಳನ್ನು ವಶಪಡಿಸಿಕೊಳ್ಳಲು ಮುಂದಾಗುವ ಮೂಲಕ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಲೋಕಾಯುಕ್ತ ನಿರೀಕ್ಷಕರು ಮನವಿಗೆ ಪೂರಕವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ
ಕ.ಪ್ರ.ವಾರ್ತೆ ಕೋಲಾರ ಆ. 2
ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15 ರಂದು ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅದ್ದೂರಿಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ವೆಂಕಟೇಶಮೂರ್ತಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕ:ಕೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲು ಕರೆದಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು.
ಎಲ್ಲಾ ಕಚೇರಿಗಳಲ್ಲಿ ಹಾಗೂ ಶಾಲೆಗಳಲ್ಲಿ ಸ್ವಾತಂತ್ರ್ಯ ಧ್ವಜಾರೋಹಣವನ್ನು ಬೆಳಿಗ್ಗೆ 8 ಗಂಟೆಗೆ ನೆರವೇರಿಸಿ ಜಿಲ್ಲಾ ಕ್ರೀಡಾಂಗಣಕ್ಕೆ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಹಾಗೂ ಶಾಲಾ ಮಕ್ಕಳು 8.45 ರೊಳಗೆ ಹಾಜರಿರಲು ತಿಳಿಸಲಾಯಿತು.ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ 9 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ನಂತರ ಧ್ವಜ ವಂದನೆ, ಪಥಚಲನ ವೀಕ್ಷಿಸಿದ ನಂತರ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡುವರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಗಳು ನಡೆಯಲಿವೆ ಎಂದು ವಿವರಿಸಿದರು.  
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 14 ರಿಂದಲೇ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕರು ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡಲು ಸೂಚಿಸಲಾಯಿತು.  ಅಲ್ಲದೆ ದೇವಾಲಯ, ಮಸೀದಿ ಮತ್ತು ಚರ್ಚ್‌ಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಮಾಡಲು ತಿಳಿಸಲಾಯಿತು.
ಅಂದು ಸಂಜೆ 5ಗಂಟೆಯಿಂದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವ್ಯವಸ್ಥೆ ಮಾಡಲು ಸೂಚಿಸಿದರು. ಸಭೆಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ಐ.ಎಂ. ಜಮೀಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬದನೂರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.