ಕೋಲಾರ

'ಮಕ್ಕಳಲ್ಲಿ ಕ್ರೀಡಾಭಿಮಾನ ಬೆಳೆಸಿ'

Published On :

ಚಿಂತಾಮಣಿ: ಮಕ್ಕಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರ ಜೊತೆಗೆ, ದೈಹಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕ್ರೀಡಾಭಿಮಾನ ಬೆಳೆಸಬೇಕು ಎಂದು ಶಿಕ್ಷಕ ಕೆ.ವಿ.ಚೌಡಪ್ಪ ಕಿವಿಮಾತು ಹೇಳಿದ್ದಾರೆ.  ತಾಲೂಕಿನ ಚಿಲಕಲನೇರ್ಪು ಹೋಬಳಿ ಮಟ್ಟದ 2013-14ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ತಾಲೂಕು ಕ್ರೀಡಾಧಿಕಾರಿ ನಾಗರಾಜ್ ಮಾತನಾಡಿ, ಕ್ರೀಡೆಗಳ ಉಪಯುಕ್ತದ ಬಗ್ಗೆ ಮತ್ತು ಉತ್ತಮ ಆರೋಗ್ಯ ಪಡೆಯಲು ಮಕ್ಕಳಲ್ಲಿ ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹ ನೀಡಬೇಕೆಂದು ನುಡಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಎನ್.ದಾಮೋಧರರೆಡ್ಡಿ, ಮರಬಳ್ಳಿ ಎನ್.ರಮೇಶ್,ಪ್ರಭಾವತಮ್ಮ, ಸಿ.ಆರ್.ಪಿ ಶಿವರಾಮ್ ಮತ್ತಿತರರು ಮಾತನಾಡಿದರು.  ವಿವಿಧ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

108 ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ
ಚಿಂತಾಮಣಿ: ಬಡ ರೋಗಿಗಳಿಗೆ ಚಿಕಿತ್ಸೆ ಸಿಗದೆ ಪರದಾಡುವಂತಹ ದುಸ್ಥಿತಿಗೆ ನಿರ್ಲಕ್ಷವೇ ಕಾರಣವಾಗಿದ್ದು ಸರ್ಕಾರ ಈ ಕೂಡಲೇ 108 ನೌಕರರ ಬೇಡಿಕೆಗಳನ್ನು ಈಡೇರಿಸಿ ಸೇವೆಗೆ ನಿಯೋಜನೆಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಕರವೇ ಕಾರ್ಯಕರ್ತರು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತಿರುವ 108 ಸಿಬ್ಬಂದಿಯ ಸೇವೆ ತುರ್ತು ಸಂದರ್ಭಗಳಲ್ಲಿ ಗ್ರಾಮೀಣ ಭಾಗದ ಬಡ ಗರ್ಭಿಣಿ ಸ್ತ್ರೀಯರಿಗೆ ಹಾಗೂ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಾಧ್ಯವಾದಷ್ಟು ಜನಪರ ಸೇವೆ ಕೈಗೊಂಡಿರುವ ನೌಕರರ ಸೇವೆಯನ್ನು ಪರಿಗಣಿಸಿ ಸರ್ಕಾರ ಈ ಕೂಡಲೇ ಸೇವೆ ನಿಯೋಜನೆಗೊಳಿಸುವಂತೆ ಕಾರ್ಯಕರ್ತರು ಒತ್ತಾಯಿಸಿದರು.  ಕರವೇ ತಾಲೂಕು ಅಧ್ಯಕ್ಷ ಆರ್.ಪಂಕಜ್, ಜಿಲ್ಲಾ ಉಪಾಧ್ಯಕ್ಷ ಊಲವಾಡಿ ಮುನಿನಾರಾಯಣಪ್ಪ, ನಗರ ಘಟಕದ ಅಧ್ಯಕ್ಷ ವೆಂಕಟೇಶಬಾಬು, ಕರವೇ ಮುಖಂಡರಾದ ವೆಂಕಟಗಿರಿಕೋಟೆ ಆಸೀಫ್, ಕೆ.ಆರ್.ನರಸಿಂಹಪ್ಪ, ಜನಾರ್ಧನ್, ಕಾರ್ತಿಕ್, ಮುಸ್ತಾಫ, ಮುಜಾಯಿಲ್ ಮೊಹಮದ್, ಅರುಣ್‌ಕುಮಾರ್ ಸೇರಿದಂತೆ ಹಲವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.