ಕೋಲಾರ

ವಿವಿಧೆಡೆ 'ಕ್ಷೀರಭಾಗ್ಯ'ಕ್ಕೆ ಚಾಲನೆ

Published On :

ಶಿಡ್ಲಘಟ್ಟ:  ಶಾಲಾ ವಿದ್ಯಾರ್ಥಿಗಳಿಗೆ ಹಾಲು ಪೂರೈಕೆ ಮಾಡುವ 'ಕ್ಷೀರಭಾಗ್ಯ' ಯೋಜನೆ ತಾಲೂಕಿನಾದ್ಯಂತ ಅನುಷ್ಠಾನಗೊಂಡಿದೆ. ತಾಲೂಕಿನಲ್ಲಿ 1 ರಿಂದ 10ನೇ ತರಗತಿವರೆಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 20700 ವಿದ್ಯಾರ್ಥಿಗಳಿಗೆ ಹಾಲು ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಮಾಸಿಕ ಯೋಜನೆಯಡಿ 12.50 ವಿನಿಯೋಗಿಸಲಾಗುತ್ತಿದೆ ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಂಗಪ್ಪ ತಿಳಿಸದರು.ಪಟ್ಟಣದ ಉಲ್ಲೂರು ಪೇಟೆ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಾಸಕ ಎಂ.ರಾಜಣ್ಣ ಯೋಜನೆಗೆ ಚಾಲನೆ ನೀಡಿದರು. ಇದರ ಜೊತೆಗೆ ಅನುದಾನಿತ ಶಿಕ್ಷಣ ಸಂಸ್ಥೆ ಸರಸ್ವತಿ ಕಾನ್ವೆಂಟ್ ಶಾಲೆಯಲ್ಲಿ ಸಂಸ್ಥೆ ಅಧ್ಯಕ್ಷ ವೆಂಕಟಸುಬ್ಬರಾವ್ ಹಾಗೂ ಕಾರ್ಯದರ್ಶಿ ಎನ್.ಶ್ರೀಕಾಂತ್ ಚಾಲನೆ ನೀಡಿದರು.ಈ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ 18 ಗ್ರಾಂ ಹಾಲಿನ ಪುಡಿ ಹಾಗೂ 10 ಗ್ರಾಂ ಸಕ್ಕರೆ ನೀಡಲಾಗುತ್ತದೆ. ಸಕ್ಕರೆ ಖರೀದಿಗೆಂದು (0.32 ಪೈಸೆ) ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋಚಿಮುಲ್ ಸಹಕಾರದೊಡನೆ ತಾಲೂಕಿನಾದ್ಯಂತ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದರು.
ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಎಚ್.ಜಿ. ಶಶಿಕುಮಾರ್ ಚಾಲನೆ ನೀಡಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬೀರೇಗೌಡ, ಎಚ್.ಕೆ. ಆಂಜಿನಪ್ಪ ಹಾಗೂ ಶೈಲಜಾ, ಮಂಜುಳಮ್ಮ ಮತ್ತಿತರರು ಹಾಜರಿದ್ದರು.
ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಜನೆಯನ್ನು ಉದ್ಘಾಟಿಸಿದ ಸಂಸ್ಥೆಯ ಕಾರ್ಯದರ್ಶಿ ಎನ್. ಶ್ರೀಕಾಂತ್ ಪ್ರೌಢಶಾಲೆಯ 700 ಹಾಗೂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 850 ವಿದ್ಯಾರ್ಥಿಗಳು ಈ ಯೋಜನೆ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ವಿ.ಸೀತಾಲಕ್ಷ್ಮಿ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎಸ್.ಕೆ. ಗೋಪಿನಾಥ್ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.