ಕೋಲಾರ

'ಕಡಿಮೆ ಆದಾಯವಿದ್ದರೆ ಉಚಿತ ಕಾನೂನು ಮಾಹಿತಿ'

Published On :

ಟೇಕಲ್: ವಾರ್ಷಿಕ 1 ಲಕ್ಷಕ್ಕಿಂತ ಕಡಿಮೆ ಆದಾಯವಿರುವ ಎಲ್ಲ ವರ್ಗದ ಜನಾಂಗಕ್ಕೂ ಮಾಲೂರಿನ ತಾಲೂಕು ನ್ಯಾಯಾಲಯ ಆವರಣದಲ್ಲಿನ ತಾಲೂಕು ಕಾನೂನು ಸೇವೆಗಳ ಸಮಿತಿಯಲ್ಲಿ ಉಚಿತ ಕಾನೂನು ಮಾಹಿತಿ ಹಾಗೂ ನೆರವು ದೊರೆಯುವುದೆಂದು ಮಾಲೂರು ಪ್ರಧಾನ ಸಿವಿಲ್ ನ್ಯಾಯಾಧೀಶ, ಜೆಎಂಎಫ್‌ಸಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ರಾಜಣ್ಣ ಸಂಕಣ್ಣ ತಿಳಿಸಿದರು.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಮಾಲೂರು ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ಕೆ.ಪಾಪಣ್ಣ ವಹಿಸಿದ್ದರು.
ಕೆ.ಮಂಜುನಾಥ್, ಎ.ವೆಂಕಟೇಶ್, ಈ.ಕೆ.ಸೋಮಶೇಖರ್ ಉಪನ್ಯಾಸ ನೀಡಿದರು. ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಎಂ.ಡಿ.ವೈಶಾಲಿ, ವಕೀಲರ ಸಂಘದ ಅಧ್ಯಕ್ಷ ಆರ್.ಸಿ.ಅಪ್ಪಾಜಿಗೌಡ, ಎಸ್‌ಬಿಸಿ ಅಧ್ಯಕ್ಷ ಕೆ.ಬಿ.ನಾರಾಯಣಸ್ವಾಮಿ ಸಭೆಯಲ್ಲಿ ಮಾತನಾಡಿದರು.
ತಾಪಂ ಸದಸ್ಯೆ ಮಂಜುಳ ವೆಂಕಟೇಶ್, ವಕೀಲರ ಸಂಘದ ಕಾರ್ಯದರ್ಶಿ ಎಚ್.ಎಲ್.ನಾಗರಾಜ್, ಗ್ರಾಪಂ ಸದಸ್ಯ ಹಾಗೂ ವಕೀಲ ಶ್ರೀನಿವಾಸ್ ಕಿರಣ್, ಟೇಕಲ್ ಎಎಸ್‌ಐ ರಶೀದ್‌ಖಾನ್, ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವೆಂಕಟೇಶಪ್ಪ, ದೈಹಿಕ ಶಿಕ್ಷಕ ಬೆಳವಟಗಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.